ಬೆಂಗಳೂರು :
ಚಿನ್ನದ ಗಟ್ಟಿ ಹಾಗೂ ಆಂಬಿಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದೆ.
ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಜನಾರ್ದನ ರೆಡ್ಡಿ ಕೆಲದಿನಗಳಿಂದ ನಾಪತ್ತೆಯಾಗಿದ್ದು, ಇಂದು ಸಂಜೆ ಅಥವಾ ನಾಳೆ ಬೆಂಗಳೂರಿನ ಸಿಸಿಬಿ ಕಚೇರಿಗೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.
ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ಕಳುಹಿಸಿದ ಹಿನ್ನೆಲೆಯಲ್ಲಿ, ಜನಾರ್ಧನ ರೆಡ್ಡಿ ಸಿಸಿಬಿ ಅಧಿಕಾರಿಗಳಿಗೆ ಶರಣಾಗುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ ಸೋಮವಾರ ನಡೆಯುವ ಜಾಮೀನು ವಿಚಾರಣೆಯಲ್ಲಿ ಜಾಮೀನು ಕೈತಪ್ಪುವ ಭೀತಿಯಿಂದ ಶರಣಾಗಲು ಮುಂದಾಗಿದ್ದಾರೆ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ