ನವದೆಹಲಿ:
ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿ ಜಿಲ್ಲೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.
ಅಕ್ರಣ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರೆಡ್ಡಿ 2015ರಿಂದ ಜಾಮೀನಿನ ಮೇಲೆ ಹೊರಗಿದ್ದಾರೆ. ಆದರೆ ರೆಡ್ಡಿ ಯಾವುದೇ ಕಾರಣಕ್ಕೂ ಬಳ್ಳಾರಿ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ ಎಂದು ಕೋರ್ಟ್ ಆದೇಶಿಸಿತ್ತು.
ಆದರೆ, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರೆಡ್ಡಿರವರ ಮಾವನನ್ನು ಬಳ್ಳಾರಿಯ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ. ಅವರನ್ನು ಭೇಟಿ ಮಾಡುವ ಸಲುವಾಗಿ ಬಳ್ಳಾರಿ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಕೋರಿ ರೆಡ್ಡಿ ಗುರುವಾರ ಅರ್ಜಿ ಸಲ್ಲಿಸಿದ್ದರು.
ಬಳ್ಳಾರಿ ಪ್ರವೇಶಿಸಲು ಅನುಮತಿ ಕೋರಿ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸದ ಸುಪ್ರೀಂ ಕೋರ್ಟ್ ರಜಾಕಾಲದ ಪೀಠ, ಜೂನ್ 8 ರಿಂದ ಎರಡು ವಾರಗಳ ಕಾಲ ಬಳ್ಳಾರಿಗೆ ತೆರಳಲು ಅನುಮತಿ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ