ಮಂಡ್ಯ: 
ಚುನಾವಣೆ ಪ್ರಚಾರ ಕೈಗೊಂಡಿರುವ ಮಂಡ್ಯ ಲೋಕಸಭೆ ಕ್ಷೇತ್ರ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ಸ್ವಾಮಿ ಅವರು ಮದ್ದೂರು ತಾಲೂಕಿನ ಆತಗೂರು ಗ್ರಾಮದಲ್ಲಿ ಇಂದು ಗದ್ದೆಯಲ್ಲಿ ಭತ್ತ ನಾಟಿ ಮಾಡಿದ್ದಾರೆ.
ಹೌದು. ಮಂಡ್ಯ ಜಿಲ್ಲೆಯ ಆತಗೂರಲ್ಲಿ ಟಿ.ರಾಮಯ್ಯ ಎಂಬುವರ ಜಮೀನಿನಲ್ಲಿ ಕೃಷಿ ಕಾರ್ಮಿಕ ಮಹಿಳೆಯರು ನಾಟಿ ಮಾಡುತ್ತಿದ್ದರು. ಅದನ್ನು ನೋಡಿದ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಸೇರಿ ಕೆಲ ನಿಮಿಷ ಭತ್ತ ನಾಟಿ ಮಾಡಿದ್ದಾರೆ.
ಈ ಹಿಂದೆ ಸಿಎಂ ಕುಮಾರಸ್ವಾಮಿ ಕೂಡಾ ಮಂಡ್ಯ ಗದ್ದೆಯಲ್ಲಿ ನಾಟಿ ಮಾಡಿದ್ದರು. ಈ ಮೂಲಕ ನಾವು ಕೂಡ ರೈತರ ಮಕ್ಕಳೆಂದು ರೈತರನ್ನು ಮತ್ತಷ್ಟು ಸೆಳೆಯುವ ಯತ್ನ ಎನ್ನಲಾಗುತ್ತಿದೆ.
ಇದಕ್ಕೂ ಮೊದಲು ಹೆಮ್ಮನಹಳ್ಳಿಯಲ್ಲಿ ಪ್ರಚಾರ ನಡೆಸಿದ ನಿಖಿಲ್ ಕುಮಾರಸ್ವಾಮಿಯವರನ್ನು ಅಲ್ಲಿನ ಕಾರ್ಯಕರ್ತರು ಪಟಾಕಿ ಸಿಡಿಸಿ ಸ್ವಾಗತಿಸಿದ್ದಾರೆ. ನಿಖಿಲ್ಗೆ ಸಚಿವ ಡಿ.ಸಿ. ತಮ್ಮಣ್ಣ ಸಾಥ್ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








