ಬೆಂಗಳೂರು:
ನಮ್ಮ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಹಾಗೂ ಜೆಡಿಎಸ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಆಪರೇಷನ್ ಕಮಲ ಯಶಸ್ವಿಯಾಗದ ಕುರಿತು ಪ್ರಶ್ನೆಗೆ ಉತ್ತರಿಸಿರುವ ಯಡಿಯೂರಪ್ಪ, ನಾವು ಯಾವುದೇ ಆಪರೇಷನ್ ಕಮಲ ಮಾಡಿಲ್ಲ. ನಮ್ಮ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಹಾಗೂ ಜೆಡಿಎಸ್. ಕಾಂಗ್ರೆಸ್ನವರೇ ಅನೇಕ ಬಿಜೆಪಿ ಶಾಸಕರ ಜೊತೆ ಸಂಪರ್ಕದಲ್ಲಿರುವುದಾಗಿ ಒಪ್ಪಿಕೊಂಡಿದ್ದಾರೆ. ಸ್ವತಃ ಈ ರಾಜ್ಯದ ಸಿಎಂ ಕುಮಾರಸ್ವಾಮಿಯವರೇ ನಮ್ಮ ಪಕ್ಷದ ಶಾಸಕನಿಗೆ ಮಂತ್ರಿ ಮಾಡುತ್ತೇನೆ, ದುಡ್ಡು ಕೊಡುತ್ತೇವೆ ಎಂದು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.
ತಾವು ಯಾವುದೇ ಅಪರೇಷನ್ ಕಮಲಕ್ಕೆ ಮುಂದಾಗಿರಲಿಲ್ಲ ಎಂದು ಮತ್ತೊಮ್ಮೆ ಸಮರ್ಥಿಸಿಕೊಂಡ ಅವರು, ಲೋಕಸಭಾ ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಶಾಸಕರು ಕ್ಷೇತ್ರದಲ್ಲಿ ಬ್ಯುಸಿಯಾಗುತ್ತಾರೆ. ಈ ಹಿನ್ನೆಲೆಯಲ್ಲಿ ಈಗ ಬಿಡುವಿನ ವೇಳೆ ಒಟ್ಟಾಗಿ ಕಳೆಯೋಣ ಎಂದು ತೀರ್ಮಾನ ಮಾಡಿದ್ದೇವು. ಆ ಕಾರಣಕ್ಕೆ ನಮ್ಮೆಲ್ಲ ಶಾಸಕರನ್ನು ರೆಸಾರ್ಟ್ಗೆ ಕರೆದುಕೊಂಡು ಹೋಗಲಾಗಿತ್ತು. ಅದಕ್ಕೆ ಬೇರಾವುದೇ ಅರ್ಥ ಕಲ್ಪಿಸಬೇಕಾಗಿಲ್ಲ. ನಾವೆಲ್ಲ ಒಟ್ಟಾಗಿದ್ದು ಮುಂದಿನ ಲೋಕಸಭೆ ಚುನಾವಣೆಯ ಬಗ್ಗೆ ಸಿದ್ದತೆ ಮಾಡುತ್ತಿದ್ದೇವೆ. ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ