ದೆಹಲಿ:
ಜಾತ್ಯತೀತ ಜನತಾದಳದ ಮಹಾಪ್ರಧಾನ ಕಾರ್ಯದರ್ಶಿ, ಹಿರಿಯ ನಾಯಕ ಡ್ಯಾನೀಶ್ ಅಲಿ ಅವರು ಬಿಎಸ್ಪಿಗೆ ಸೇರ್ಪಡೆಗೊಂಡು ದೇವೇಗೌಡರಿಗೆ ಬಿಗ್ ಶಾಕ್ ನೀಡಿದ್ದಾರೆ.
ಜೆಡಿಎಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅಲಿ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಸತೀಶ್ ಮಿಶ್ರಾ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದರು. ಮಿಶ್ರಾ ಅವರು ಹೂಗುಚ್ಛ ನೀಡಿ ಅಲಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಉತ್ತರ ಪ್ರದೇಶದ ಹಾಪುರ್ ಲೋಕಸಭಾ ಕ್ಷೇತ್ರದಿಂದ ಅಲಿಯವರಿಗೆ ಬಿಎಸ್ ಪಿ ಟಿಕೇಟ್ ನೀಡಲಾಗುವುದು ಎನ್ನಲಾಗಿದ್ದು, ಮಾಯಾವತಿ ಅವರು ಅದಕ್ಕೆ ಒಪ್ಪಿರಲಿಲ್ಲ. ಈ ಹಿನ್ನಲೆಯಲ್ಲಿ ಅವರು ಬಿಎಸ್ ಪಿ ಗೆ ಸೇರಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಇತ್ತೀಚೆಗಷ್ಟೇ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸೀಟು ಹಂಚಿಕೆ ಬಗ್ಗೆ ರಾಹುಲ್ ಗಾಂಧಿ ಜೊತೆ ಮಾತನಾಡಿ ಅಂತಿಮಗೊಳಿಸಿದ್ದ ಅಲಿ ಜೆಡಿಎಸ್‌ನ ಹಿರಿಯ ನಾಯಕನಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ