ಬೆಂಗಳೂರು:
ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್‌ವಿ.ದತ್ತ ಅವರನ್ನು ನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ದತ್ತ ಅವರಿಗೆ ಈ ಹಿಂದೆ ಸ್ಟಂಟ್ ಅಳವಡಿಸಲಾಗಿತ್ತು. ಮೂರು ದಿನಗಳ ಹಿಂದೆ ಆಟೋದಲ್ಲಿ ತೆರಳುತ್ತಿದ್ದಾಗ ಜೆಡಿಎಸ್ ಕಚೇರಿ ಬಳಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.
3 ದಿನಗಳಿಂದಲೂ ಅಪೊಲೋ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಅಗತ್ಯ ಚಿಕಿತ್ಸೆಯ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
