ತುಮಕೂರು:
ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ ಮಾಜಿ ಸಚಿವರು ಹಾಗೂ ಶಿರಾ ಕ್ಷೇತ್ರದ ಶಾಸಕರಾದ ಶ್ರೀ ಬಿ.ಸತ್ಯನಾರಾಯಣ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಅಂತಿಮ ನಮನ ಸಲ್ಲಿಸಿದ್ದಾರೆ.
ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಇಂದು ಬೆಳಗ್ಗೆ 11:45 ಕ್ಕೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅಂತಿಮ ನಮನ ಸಲ್ಲಿಸಿದ್ದಾರೆ.
ನಿರಂತರವಾಗಿ 30 ವರ್ಷಗಳ ಕಾಲ ನನ್ನ ಜತೆಗಿದ್ದ ಶಿರಾ ಶಾಸಕ ಸತ್ಯನಾರಾಯಣ ರಾಜಕೀಯ ಜೀವನದಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೆ ಪ್ರಾಮಾಣಿಕ ಸೇವೆ ಸಲ್ಲಿಸಿದವರು ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಮೃತ ಶಾಸಕನನ್ನು ಸ್ಮರಿಸಿಕೊಂಡಿದ್ದಾರೆ.
ಮಾಜಿ ಸಚಿವ ಶ್ರೀನಿವಾಸ್, ಜೆಡಿಎಸ್ ಶಾಸಕರಾದ ಗೌರಿಶಂಕರ್, ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದುಕೊಂಡರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
