ಬೆಂಗಳೂರು :
ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡುವ ಸಂಬಂಧ ಜೆಡಿಎಸ್‌ನ ಕೆಲವು ಶಾಸಕರು ಒಲವು ತೋರಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕೆಲವು ಶಾಸಕರು ನೂತನ ಸರ್ಕಾರ ರಚಿಸಿರುವ ಬಿಜೆಪಿಗೆ ಬಾಹ್ಯ ಬೆಂಬಲನೀಡುವುದು ಸೂಕ್ತ ಎಂದು ಹೆಚ್.ಡಿ.ಕುಮಾರಸ್ವಾಮಿಗೆ ಒತ್ತಾಯಿಸಿದ್ದಾರೆ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ಜೆಡಿಎಸ್ ಶಾಸಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ಜೆಡಿಎಸ್ ಶಾಸಕರ ಸಭೆಯಲ್ಲಿ ಕೆಲ ಶಾಸಕರು ಬಿಜೆಪಿಗೆ ಬೆಂಬಲ ಕೊಡುವ ಬಗ್ಗೆ ಒತ್ತಡ ಹಾಕಿದ್ದರು. ಇನ್ನೂ ಕೆಲವರು ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಕುರಿತು ಕುಮಾರ ಸ್ವಾಮಿಅವರು ಯಾವ ನಿರ್ಧಾರ ತೆಗೆದುಕೊಂಡರೂ ನಾವೆಲ್ಲರೂ ಒಟ್ಟಾಗಿ ಇರುತ್ತೇವೆ ಎಂದರು.
ಶಾಸಕ ಸಾ.ರಾ.ಮಹೇಶ್ ಅವರು ಮಾಸತನಾಡಿ, ಪಕ್ಷ ಯಾವ ತೀರ್ಮಾನ ತೆಗೆದುಕೊಂಡರೂ ಒಮ್ಮತದ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.
ಈ ಎರಡೂ ವಿಷಯಗಳ ಬಗ್ಗೆ ಎಚ್.ಡಿ. ಕುಮಾರಸ್ವಾಮಿಯವರೇ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರು ತೆಗೆದುಕೊಳ್ಳುವ ತೀರ್ಮಾನವನ್ನು ಎಲ್ಲರೂ ಒಪ್ಪಿಕೊಳ್ಳುತ್ತೇವೆ ಎಂದು ಜೆಡಿಎಸ್ ಶಾಸಕರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ