ಬೆಂಗಳೂರು:
ಜೆಡಿಎಸ್ ಪ್ರಾಥಮಿಕ ಸದಸ್ಯತ್ವ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ವಕ್ತಾರ ಸ್ಥಾನಗಳಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್‍ಬಾಬು ರಾಜೀನಾಮೆ ನೀಡಿದ್ದಾರೆ.
ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಆಗಿದ್ದರು. ಆದರೆ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ 40 ವರ್ಷಗಳಿಂದ ಜೆಡಿಎಸ್ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ್ದಂತ ರಮೇಶ್ ಬಾಬು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಪಕ್ಷದಿಂದ ಹೊರ ಬಂದಿದ್ದಾರೆ. ಈ ಮೂಲಕ ವಿಧಾನಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪಕ್ಷದೊಂದಿಗೆ ಭಾವನಾತ್ಮಕ ಸಂಬಂಧವಿದ್ದರೂ ಅನಿವಾರ್ಯ ಹಾಗೂ ತಮಗೆ ತಿಳಿದಿರುವ ಕಾರಣಗಳಿಂದ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಪತ್ರದಲ್ಲಿ ರಮೇಶ್‍ಬಾಬು ತಿಳಿಸಿದ್ದಾರೆ. ರಾಜಕೀಯವಾಗಿ ನೀಡಿದ ಮಾರ್ಗದರ್ಶನ, ಸಲಹೆ-ಸಹಕಾರಗಳಿಗೆ ಗೌಡರಿಗೆ ಧನ್ಯವಾದ ಅರ್ಪಿಸುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ