ಸುಪ್ರೀಂನ 47 ನೇ ಸಿಜೆಐ ಆಗಿ ಎಸ್.ಎ.ಬೊಬ್ಡೆ ಪದಗ್ರಹಣ!!!

ದೆಹಲಿ :

      ಸುಪ್ರೀಂಕೋರ್ಟ್‌ನ 47 ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಶರದ್ ಅರವಿಂದ್ ಬೋಬ್ಡೆ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

      ನ್ಯಾಯಮೂರ್ತಿ ಬೊಬ್ಡೆ ಅವರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 9: 30 ಕ್ಕೆ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು.

      ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಅಕ್ಟೋಬರ್ 18 ರಂದು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ-ನ್ಯಾಯಾಧೀಶರಾದ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಅವರನ್ನು ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದರು.

ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಸುಮಾರು 18 ತಿಂಗಳು ಸಿಜೆಐ ಆಗಿ ಸೇವೆ ಸಲ್ಲಿಸಲಿದ್ದು, ಏಪ್ರಿಲ್ 23, 2021 ರಂದು ನಿವೃತ್ತರಾಗಲಿದ್ದಾರೆ. ಆದ್ದರಿಂದ ಬೋಬ್ಡೆ ಅವರು ಸುಮಾರು 17 ತಿಂಗಳ ಕಾಲ ಸುಪ್ರೀಂಕೋರ್ಟ್ನಲ್ಲಿ ಸಿಜೆಐ ಆಗಿ ಕಾರ್ಯನಿರ್ವಹಿಸಲಿದ್ದಾರೆ.

      63ರ ವಯಸ್ಸಿನ ಬೋಬ್ಡೆ, ಜಸ್ಟಿಸ್ ರಂಜನ್ ಗೊಗೊಯ್ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಗೊಗೊಯ್ ಅವರ ಅಧಿಕಾರದ ಅವಧಿಯು ನಿನ್ನೆ(ಭಾನುವಾರ)ಗೆ ಅಂತ್ಯವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap