ಕೊಪ್ಪಳ:
‘ಚುನಾವಣೆ ಮುಗಿದ ಬಳಿಕ ಸಿಎಂ ಕುಮಾರಸ್ವಾಮಿ ನೆಗೆದು ಬೀಳ್ತಾರೆ’ ಎಂದು ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಪಕ್ಷದ ಅಭ್ಯರ್ಥಿಯ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕೆ.ಎಸ್. ಈಶ್ವರಪ್ಪ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಟೀಕಾಪ್ರಹಾರ ನಡೆಸುವ ವೇಳೆ ಜೆಡಿಎಸ್ ಒಂದೂ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ, ಎಚ್‌ಡಿ ದೇವೇಗೌಡ ಅವರ ಕುಟುಂಬದ ನಾಲ್ವರೂ ಕೂಡ ಕಣ್ಣೀರು ಹಾಕುತ್ತಾರೆ. ಸರ್ಕಾರ ಪತನಗೊಳ್ಳುತ್ತದೆ ಎನ್ನುವ ಬದಲು ‘ಈ ಲೋಕಸಭಾ ಚುನಾವಣೆಯ ಬಳಿಕ ಕುಮಾರಸ್ವಾಮಿಯವರು ನೆಗೆದುಬೀಳ್ತಾರೆ ಆಗ ಅವರ ಸರಕಾರವೂ ಬಿದ್ದು ಹೋಗುತ್ತೆ’ ಎಂದು ಹೇಳಿದ್ದಾರೆ.
ಚುನಾವಣೆ ಹೊಸ್ತಿಲಲ್ಲಿರುವಾಗ ಪ್ರತಿಪಕ್ಷ ವಿರೋಧ ಪಕ್ಷಗಳು ಆರೋಪ, ಪ್ರತ್ಯಾರೋಪಗಳನ್ನು ಮಾಡುವುದು ಸಾಮಾನ್ಯ ಆದರೆ ಇದೀಗ ಅದು ತಾರರಕ್ಕೇರಿದೆ. ‘
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
