ಬೆಂಗಳೂರು :
ಕೊರೋನಾ ಸೋಂಕು ಹರಡುವ ಮುಂಜಾಗ್ರತಾ ಕ್ರಮವಾಗಿ, ಈ ಬಾರಿಯ ಬಸವನಗುಡಿಯ ಕಡಲೇಕಾಯಿ ಪರಿಷೆಗೆ ಬ್ರೇಕ್ ಹಾಕಲಾಗಿದೆ.
ಈ ಕುರಿತಂತೆ ರಾಜ್ಯ ಮುಜುರಾಯಿ ಇಲಾಖೆ ಮಾಹಿತಿ ನೀಡಿದ್ದು, ಕೊರೋನಾ ಸೋಂಕಿನ ಭೀತಿ ರಾಜ್ಯದ ರಾಜಧಾನಿಯಲ್ಲಿ ಹೆಚ್ಚಾಗಿದೆ. ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಪ್ರತಿ ವರ್ಷ ನಡೆಸಿಕೊಂಡು ಬಂದಿರುವಂತ ಬಸವನಗುಡಿಯ ಕಡಲೆಕಾಯಿ ಪರಿಷೆಯನ್ನು ಈ ಬಾರಿ ನಡೆಸದಿರಲು ತೀರ್ಮಾನ ಕೈಗೊಳ್ಳಲಾಗಿದೆ. ಯಾವುದೇ ಅಂಗಡಿ ಹಾಕಬಾರದು. ಸರಳವಾಗಿ ಪರಿಷೆ ಆಚರಿಸಲು ಸೂಚನೆ ನೀಡಿದೆ.
ರಾಜಧಾನಿಯ ಪ್ರಸಿದ್ಧ ಪರಿಷೆಗಳಲ್ಲಿ ಒಂದು ಬಸವನಗುಡಿ ಕಡಲೇಕಾಯಿ ಪರಿಷೆ. ಇಂತಹ ಪರಿಷೆಗೆ ಕೊರೋನಾ ಸೋಂಕಿನ ಭೀತಿ ಅಡ್ಡಿಯಾಗಿದೆ. ಹೀಗಾಗಿ ಈ ಬಾರಿಯ ಬಸವನಗುಡಿಯ ಕಡಲೆಕಾಯಿ ಪರಿಷೆ ನಿಷೇಧಗೊಂಡಿದ್ದು, ಸರಳವಾಗಿ ಆಚರಿಸಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
