ಶಿವಮೊಗ್ಗ:
ಕಾಂಗ್ರೆಸ್ ನ ಹಿರಿಯ ನಾಯಕ ಮತ್ತು ಮಾಜಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಹೆಚ್ಚಿನ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಐಸಿಯುನಿಂದ ವಾರ್ಡ್ ಗೆ ಅವರನ್ನು ವರ್ಗಾಯಿಸಲಾಗಿದೆ.
ವಯೋಸಹಜ ಕಾಯಿಲೆಯಿಂದ ಆರೋಗ್ಯದಲ್ಲಿ ಏರುಪೇರಾಗಿ ಗುರುವಾರ ರಾತ್ರಿ ಸಾಗರದ ಮನೆಯಲ್ಲಿ ಕಾಗೋಡು ತಿಮ್ಮಪ್ಪ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆಯ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಹೀಗಾಗಿ ಅವರನ್ನು ಐಸಿಯುನಿಂದ ಸ್ಪೆಷಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು.
ಈಗ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಪೊಲೀಸ್ ಎಸ್ಕಾರ್ಟ್ ಮೂಲಕ ಇಂದು ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ.
ಆಸ್ಪತ್ರೆಗಳಿಂದ ಬಂದಿರುವ ಮಾಹಿತಿ ಪ್ರಕಾರ, ಉಸಿರಾಟದ ತೊಂದರೆ ಮತ್ತು ರಕ್ತದೊತ್ತಡ ಸಮಸ್ಯೆಯಿಂದ ಆರೋಗ್ಯದಲ್ಲಿ ವ್ಯತ್ಯಯ ಉಂಟಾಯಿತು. ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸಿದ್ದಾರೆ. ಇಂದು ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ