ಕಲಬುರ್ಗಿ : ಸಿಲಿಂಡರ್ ಸ್ಫೋಟ ; ಓರ್ವ ಸಾವು!!

ಕಲಬುರ್ಗಿ :

      ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ನಡೆದಿದೆ. 

      ಮೊಮಿನಪುರಾ ಬಡಾವಣೆಯ ರಾಜು ತಾಯಿತ್ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದರು. ತಕ್ಷಣ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮನೆ ಮಾಲೀಕ ರಾಜು ತಾಯಿತ್(50) ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

      ಗಾಯಾಳುಗಳ ಪೈಕಿ ಮತ್ತೋರ್ವರ ಸ್ಥಿತಿ ಗಂಭೀರವಾಗಿದೆ. ಮೃತನ ತಾಯಿ ಗಂಗಮ್ಮ ತಾಯಿತ್ (70), ಪತ್ನಿ ಸುಮಾ ತಾಯಿತ್ (40), ಮಗ ಬಸಪ್ಪ ತಾಯಿತ್ (22)ಗೆ ಜಿಲ್ಲಾ ಯುನೈಟೆಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

      ಸ್ಫೊಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, ಘಟನಾ ಸ್ಥಳಕ್ಕೆ ಸೇಡಂ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap