ಕಲಬುರ್ಗಿ :
ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಇಂದು ಕೊರೋನಾಗೆ ಪಿಡಿಒ ಬಲಿಯಾಗಿದ್ದಾರೆ.
ಜಿಲ್ಲೆಯ ಶಹಾಬಾದ್ ತಾಲ್ಲೂಕಿನ ಮರತೂರು ಪಂಚಾಯತ್ ನ 58 ವರ್ಷದ ಅಭಿವೃದ್ಧಿ ಅಧಿಕಾರಿಗೆ ಜುಲೈ.17ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಹೀಗಾಗಿ ಅವರನ್ನು ಕಲಬುರ್ಗಿಯ ಜಿಮ್ಸ್ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ, ಕೊರೋನಾಗೆ ಮರತೂರ ಗ್ರಾಮ ಪಂಚಾಯ್ತಿಯ ಪಿಡಿಒ ಬಲಿಯಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ