ಕಲಬುರಗಿ :
ಬೈಕ್ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಸಂಭವಿಸಿದೆ.
ಘಟನೆಯಲ್ಲಿ ಭೀಮಾಶಂಕರ್ ಪ್ಯಾಟಿ (30), ಅಕ್ಬರ್ ಪಟೇಲ್ (28) ಮತ್ತು 18 ವರ್ಷದ ಯುವತಿ ಸೇರಿ ಮೂವರು ಮೃತಪಟ್ಟಿದ್ದಾರೆ.
ಮೂವರು ತೆರಳುತ್ತಿದ್ದ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಬೈಕ್ ನಜ್ಜುಗುಜ್ಜಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ