ಕಲಬುರಗಿ:
ಗ್ಯಾಸ್ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಮಾಣಿಕೇಶ್ವರಿ ಕಾಲೋನಿಯಲ್ಲಿ ನಡೆದಿದೆ.
ಸುರೇಶ್ ಎಂಬುವರಿಗೆ ಸೇರಿದ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಸುರೇಶ್, ಭರತ್, ರಮೇಶ್, ಅಂಬಿಕಾ, ಶಶಿಕಲಾ, ಲಿಂಗರಾಜ ಎನ್ನುವವರಿಗೆ ಗಂಭೀರ ಗಾಯಗಳಾಗಿವೆ.
ಬೆಳಿಗ್ಗೆ ಅಡುಗೆ ಮಾಡುವಾಗ ಗ್ಯಾಸ್ ಲೀಕ್ ಆಗಿ ಸ್ಫೋಟಗೊಂಡಿದೆ. ಈ ವೇಳೆ ಸ್ಫೋಟದ ರಭಸಕ್ಕೆ ಒಬ್ಬರ ಕಾಲು ಕಟ್ ಆಗಿದೆ. ಬಾಗಿಲು ಮತ್ತು ಕಿಟಕಿಗಳು ಪುಡಿ ಪುಡಿಯಾಗಿವೆ. ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿವೆ. ಕಾಲು, ಕೈ, ಮುಖ ಇತ್ಯಾದಿಗಳ ಕಡೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದಾರೆ. ರಾಘವೇಂದ್ರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ