ಹಲ್ಲೆ ಪ್ರಕರಣ : ಮುಂದುವರಿದ ಶಾಸಕ ಗಣೇಶ್ ಜೈಲುವಾಸ!!

ಬೆಂಗಳೂರು :

      ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ಜೈಲು ಸೇರಿರುವ ಕಂಪ್ಲಿ ಶಾಸಕ ಜೆ.ಎನ್. ಗಣೇಶ್‍ಗೆ ಜಾಮೀನು ನೀಡದೇ ಆದೇಶ ಹೊರಡಿಸಿದೆ.

     ಗಣೇಶ್ ಇಂದು ಬಿಡುಗಡೆಯಾಗಬಹುದೆಂಬ ನಿರೀಕ್ಷೆಯಿತ್ತು ಆದರೆ ಕೋರ್ಟ್ ಅರ್ಜಿ ವಿಚಾರಣೆಯನ್ನು ಏ.8ಕ್ಕೆ ಮುಂದೂಡಿದ್ದರಿಂದ ಬಿಡುಗಡೆ ಮುಂದೂಡಲಾಗಿದೆ.

      ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕಾಗಿರುವುದರಿಂದ ಹಾಗೂ ಅವರ ಲಭ್ಯತೆ ಕ್ಷೇತ್ರದ ಮತದಾರರಿಗೆ ಅಗತ್ಯವಾಗಿದೆ. ಕಕ್ಷಿದಾರರಿಗೆ ಜಾಮೀನು ನೀಡಲು ಮನಸ್ಸು ಮಾಡಬೇಕೆಂದು ಗಣೇಶ್ ಪರ ವಕೀಲ ಶ್ಯಾಮ್‍ಸುಂದರ್ ಹೈಕೋರ್ಟ್‍ಗೆ ಮನವಿ ಮಾಡಿದರು. ಆದರೆ ಇದಕ್ಕೆ ಸೊಪ್ಪು ಹಾಕದ ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನು ಮುಂದೂಡಿದ್ದಾರೆ.

      ಬಿಜೆಪಿಯ ಆಪರೇಷನ್ ಕಮಲ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಪಕ್ಷದ ನಾಯಕರು ಈಗಲ್‌ಟನ್ ರೆಸಾರ್ಟ್‌ಗೆ ಕರೆದೊಯ್ದಿದ್ದರು. ಅಲ್ಲಿ ಗಣೇಶ್ ಹಾಗೂ ಆನಂದ್ ಸಿಂಗ್ ಪರಸ್ಪರ ಹೊಡೆದಾಡಿಕೊಂಡಿದ್ದರು. ಆಗ ಆನಂದ್ ಸಿಂಗ್ ಮೇಲೆ ಗಣೇಶ್ ಹಲ್ಲೆ ನಡೆಸಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ