ಬೆಂಗಳೂರು:
ಕಿಡ್ನಾಪ್ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಚಲನಚಿತ್ರ ನಟ ದುನಿಯಾ ವಿಜಯ್ ಅವರಿಗೆ ಇಂದಾದರೂ ಕೋರ್ಟ್ ನಿಂದ ಜಾಮೀನು ಸಿಗುತ್ತಾ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಕಾಡುತ್ತಿದೆ.
ಇಂದು ಮಧ್ಯಾಹ್ನ 3 ಗಂಟೆಗೆ ಜಾಮೀನು ಅರ್ಜಿಯ ಬಗ್ಗೆ ವಿಚಾರಣೆ ನಡೆಯಲಿದ್ದು, ನಂತರ ನ್ಯಾಯಾಧೀಶರಾದ ಟಿ.ಪಿ.ರಾಮಲಿಂಗೇಗೌಡ ಅವರು, ವಿಚಾರಣೆ ನಡೆಸಿ, ಜಾಮೀನಿಗೆ ಸಂಬಂಧಿಸಿದಂತೆ ತೀರ್ಪು ನೀಡುವ ಸಾಧ್ಯತೆ ಇದೆ.
ವಿಜಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ : 2 ದಿನ ಜೈಲು ವಾಸವೇ ಗತಿ..!
ಒಂದು ವೇಳೆ ದುನಿಯಾ ವಿಜಯ್ ಗೆ ಇಂದು ಜಾಮೀನು ಸಿಕ್ಕರೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಮತ್ತೆ ಜಾಮೀನು ನಿರಾಕರಣೆ ಆದರೇ ಬಹುಶಃ ಹೈಕೋರ್ಟ್ ಗೆ ಹೋಗುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
