ಬಿಎಸ್‍ವೈ ಸಂಪುಟ ವಿಸ್ತರಣೆ : 10 ಮಂದಿ ಸಚಿವರ ಸೇರ್ಪಡೆ!!

ಬೆಂಗಳೂರು :

      ರಾಜ್ಯ ಬಿಜೆಪಿ ಸರ್ಕಾರದ ನೂತನ ಸಂಪುಟ ಇಂದು ವಿಸ್ತರಣೆಯಾಗಿದ್ದು, ಉಪ ಚುನಾವಣೆಯಲ್ಲಿ ಗೆದ್ದಂತ 10 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 

      ನೂತನ ಸಚಿವರಾಗಿ 10 ಮಂದಿ ಇಂದು ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ವಿ.ಆರ್.ವಾಲಾ ಸಚಿವರಿಗೆ ಪ್ರಮಾಣವಚನ ಬೋಧನೆ ಮಾಡಿದರು.

      ಸೋಮಶೇಖರ್, ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್, ಕೆ. ಸುಧಾಕರ್, ಬೈರತಿ ಬಸವರಾಜು, ಶಿವರಾಮ ಹೆಬ್ಬಾರ್, ಬಿ.ಸಿ. ಪಾಟೀಲ್, ಗೋಪಾಲಯ್ಯ, ನಾರಾಯಣಗೌಡ ಹಾಗೂ ಶ್ರೀಮಂತ ಪಾಟೀಲ್ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

      ಇವರುಗಳ ಪೈಕಿ ರಮೇಶ್ ಜಾರಕಿಹೊಳಿ ಹಾಗೂ ಆನಂದ್ ಸಿಂಗ್ ಹೊರತುಪಡಿಸಿ ಉಳಿದೆಲ್ಲರೂ ಪ್ರಥಮ ಬಾರಿಗೆ ಸಚಿವರಾಗಿದ್ದಾರೆ. ಮತ್ತೊಂದು ವಿಶೇಷವೆಂದರೆ ಶ್ರೀಮಂತ ಪಾಟೀಲ್ ಶಾಸಕರಾಗಿ ಆಯ್ಕೆಯಾದ ಮೊದಲ ಪ್ರಯತ್ನದಲ್ಲೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

      ಉಪ ಚುನಾವಣೆಯಲ್ಲಿ ಗೆದ್ದ 12 ಬಿಜೆಪಿ ಶಾಸಕರಲ್ಲಿ 10 ಜನರು ಯಡಿಯೂರಪ್ಪ ಸಂಪುಟಕ್ಕೆ ಸೇರಿದ್ದಾರೆ. ಉಪ ಚುನಾವಣೆಯಲ್ಲಿ ಗೆದ್ದರೂ ಅಥಣಿಯ ಮಹೇಶ್ ಕುಮಟಳ್ಳಿ ಮತ್ತು ರಾಣೆಬೆನ್ನೂರಿನ ಅರುಣ್ ಕುಮಾರ್ ಪೂಜಾರಿ ಸಂಪುಟಕ್ಕೆ ಸೇರ್ಪಡೆಗೊಂಡಿಲ್ಲ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ