ಹೂಡಿಕೆದಾರರ ನೆಚ್ಚಿನ ತಾಣವಾಗಿ ಕರ್ನಾಟಕ!!?

ಬೆಂಗಳೂರು:

      ಹೂಡಿಕೆದಾರರನ್ನು ಆಕರ್ಷಿಸುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ಮೊದಲನೇಯದಾಗಿದ್ದು, ಉದ್ಯಮ ಸ್ಥಾಪನೆಗೆ ಕರ್ನಾಟಕದಲ್ಲಿ ಉತ್ತಮ ಅವಕಾಶವಿದೆ. ಜಾಗತಿಕ ಸಮುದಾಯ ಇದನ್ನು ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

       ಅಮೆರಿಕದ ಪ್ರವಾಸದಲ್ಲಿರುವ ಅವರು, ಇಂದು ವಾಷಿಂಗ್ಟನ್ ಡಿಸಿಯಲ್ಲಿ ಏರ್ಪಡಿಸಿದ್ದ ಹೂಡಿಕೆದಾರರ ಸಭೆಯಲ್ಲಿ ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದರು.

      ರಾಜ್ಯದ ರಾಜಧಾನಿ ಬೆಂಗಳೂರನ್ನು ಇತ್ತೀಚೆಗೆ ಜಗತ್ತಿನ ಅತ್ಯಂತ ಕ್ರಿಯಾಶೀಲ ನಗರವೆಂದು ಗುರುತಿಸಲಾಗಿದೆ. ಇಲ್ಲಿನ ಕ್ರಿಯಾಶೀಲ, ಉದ್ಯಮ ಸ್ನೇಹಿ ನೀತಿಗಳು, ಅತ್ಯುತ್ತಮ ಮೂಲ ಸೌಕರ್ಯಗಳು, ಪರಿಣಿತ ಮಾನವ ಸಂಪನ್ಮೂಲ ಹಾಗೂ ನೂತನ ಆವಿಷ್ಕಾರ ಮತ್ತು ಅಭಿವೃದ್ಧಿಗೆ ಪೂರಕ ವಾತಾವರಣ ಕರ್ನಾಟಕದ ಕೈಗಾರಿಕಾ ಬೆಳವಣಿಗೆಗೆ ಕಾರಣವಾಗಿದೆ. ಈ ಕಾರಣಕ್ಕಾಗಿಯೇ ದೇಶದ ಜಿಡಿಪಿ 7.2 ರಷ್ಟಿದ್ದರೆ, ರಾಜ್ಯದ ಜಿಡಿಪಿ ಶೇ. 10ರಷ್ಟಿದೆ ಎಂದು ತಿಳಿಸಿದರು

      ದೇಶದಲ್ಲಿ ಜೆಡಿಪಿ ಪ್ರಗತಿ ಶೇ, 7.2 ರಷ್ಟಿದ್ದರೆ, ಕರ್ನಾಟಕದಲ್ಲಿ ಶೇ, 10 ರಷ್ಟಿದೆ. ರಾಜ್ಯದಲ್ಲಿ ಕೌಶಲಾಭಿವೃದ್ಧಿಗೂ ವಿಪುಲ ಅವಕಾಶವಿದೆ. ಭಾರತದ ಒಟ್ಟು ಯಂತ್ರ ಬಿಡಿಭಾಗಗಳ ಉತ್ಪಾದನೆಯಲ್ಲಿ ರಾಜ್ಯದ ಪಾಲು ಶೇ, 60 ರಷ್ಟಿದೆ. ಐಟಿ ರಪ್ತು ಶೇ. 39 ರಷ್ಟಿದೆ. ಶೇ. 33 ರಷ್ಟು ಬಯೊಟೆಕ್ ರಪ್ತು ಇದೆ. ಮೂಲಸೌಲಭ್ಯ ಅಭಿವೃದ್ಧಿಗೂ ವಿಶೇಷ ಗಮನ ಹರಿಸಲಾಗಿದೆ. ರಾಜ್ಯದಲ್ಲಿ 9 ಕಡೆ ಉತ್ಪದನಾ ಉದ್ದೇಶಿತ ಕ್ಲಸ್ಟರ್ ಗಳನ್ನು ರಚಿಸಲಾಗಿದೆ ಎಂದರು.

      ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳೂ ಸಾಕಷ್ಟು ಸಂಖ್ಯೆಯಲ್ಲಿದ್ದು, ಅವುಗಳಿಗೆ ಉತ್ತೇಜನ ನೀಡುವ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ನಾಲ್ಕನೇ ಕೈಗಾರಿಕಾ ಕ್ರಾಂತಿಯಲ್ಲಿ ಕರ್ನಾಟಕವು ಮುಂಚೂಣಿಯ ರಾಜ್ಯವಾಗಿ ಹೊಮ್ಮಬೇಕೆನ್ನುವುದು ನಮ್ಮ ದೃಢ ಸಂಕಲ್ಪ. ಈ ನಿಟ್ಟಿನಲ್ಲಿ ಉತ್ಪಾದನೆಯನ್ನು ಡಿಜಿಟಲೀಕರಣಗೊಳಿಸಲು ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆ ಮಾಡಲು ನಮ್ಮ ಸರ್ಕಾರ ಉತ್ಸುಕವಾಗಿದೆ.

      ಕರ್ನಾಟಕವು ಸ್ಟಾರ್ಟ್ ಅಪ್ ವಿಷಯದಲ್ಲಿ 2ನೇ ಸ್ಥಾನದಲ್ಲಿದೆ. ಇನ್ನಷ್ಟು ಹೂಡಿಕೆ ಆಕರ್ಷಿಸಿ, ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ರಾಜ್ಯವು 2020ರ ಜನವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಹಮ್ಮಿಕೊಂಡಿದೆ. ನೀವು ಪಾಲ್ಗೊಳ್ಳುವ ಮೂಲಕ ಅದನ್ನು ಯಶಸ್ವಿಗೊಳಿಸಬೇಕೆಂದು ಮುಖ್ಯಮಂತ್ರಿ ಮನವಿ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap