ಬೆಂಗಳೂರು :
ಸಿಇಟಿ ವಿದ್ಯಾರ್ಥಿಗಳಿಗೆ ಜುಲೈ 30, 31ಕ್ಕೆ ಪರೀಕ್ಷೆ ನಡೆಸಲಾಗುತ್ತದೆ ಎಂಬುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಲಾಕ್ ಡೌನ್ ನಿಂದಾಗಿ ಸಿಇಟಿ ಪರೀಕ್ಷೆ ದಿನಾಂಕವನ್ನು ಮುಂದೂಡಲಾಗಿತ್ತು. ಸಿಇಟಿ 2020 ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಪರೀಕ್ಷೆಗಾಗಿ ಮತ್ತೆ ಅರ್ಜಿ ಸಲ್ಲಿಸಲು ಮೇ.8ರಿಂದ 18ರ ವರೆಗೆ ಅವಕಾಶ ಕೂಡ ನೀಡಲಾಗಿತ್ತು. ಇದೀಗ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಿಟಿಟಿ ಪರೀಕ್ಷಾ ದಿನಾಂಕವನ್ನು ಜುಲೈ 30, 31ಕ್ಕೆ ನಿಗಧಿ ಪಡಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
