ಬೆಂಗಳೂರು:
ಮಾರಕ ಕೊರೊನಾ ವಿರುದ್ಧ ಹೋರಾಡುತ್ತಿರುವ ಯೋಧರಿಗಾಗಿ ಒಪ್ಪತ್ತಿನ ಉಪವಾಸ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಪಕ್ಷದ ಕಾರ್ಯಕರ್ತರಿಗೆ ಕರೆಯನ್ನು ನೀಡಿದ್ದು, ಏಪ್ರಿಲ್ 6 ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವಾಗಿದೆ. ಈ ದಿನವನ್ನು ಸರಳವಾಗಿ ಆಚರಿಸಲು ಬಿಜೆಪಿ ಮುಂದಾಗಿದ್ದು, ಕೊರೊನಾ ಸೋಂಕು ವಿರುದ್ಧ ವೈದ್ಯರು, ಪೊಲೀಸರು, ದಾದಿಯರು ಹಾಗೂ ಆಶಾ ಕಾರ್ಯಕರ್ತರು ಹೋರಾಟ ನಡೆಸುತ್ತಿದ್ದಾರೆ. ದೇಶವೇ ಸಂಕಷ್ಟದ ಪರಿಸ್ಥಿತಿಯಲ್ಲಿದ್ದು ಇಂತಹ ಸಂದರ್ಭದಲ್ಲಿ ಒಪ್ಪೊತ್ತಿನ ಉಪವಾಸ ನಡೆಸುವ ಮೂಲಕ ಕೊರೊನಾ ವಿರುದ್ಧ ಹೋರಾಟ ನಡೆಸುವವರಿಗೆ ಗೌರವ ಸೂಚಿಸಬೇಕು ಎಂದು ಪಕ್ಷದ ಉದ್ಧೇಶವಾಗಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಡಿಯೋ ಸಂದೇಶದ ಮೂಲಕ ಬಿಜೆಪಿ ಕಾರ್ಯಕರ್ತರು ಒಪ್ಪೊತ್ತಿನ ಉಪವಾಸ ನಡೆಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ಸ್ವತಃ ತಾವೂ ಒಪ್ಪೊತ್ತಿನ ಉಪವಾಸವನ್ನು ನಡೆಸುತ್ತೇನೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ