ಬೆಂಗಳೂರು:
ಸಿಎಂ ಗೃಹ ಕಚೇರಿ ಕೃಷ್ಣಾದ ಸಿಬ್ಬಂದಿಗೆ ಸೋಂಕು ತಗುಲಿದ್ದು ಮುಂಜಾಗ್ರತಾ ಕ್ರಮವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೋಂ ಕ್ವಾರಂಟೈನ್ ಆಗಿದ್ದು, ಐದು ದಿನಗಳ ಕಾಲ ಮನೆಯಿಂದಲೇ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದ್ದಾರೆ.
ಕೃಷ್ಣಾ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿಯ ಟೆಲಿಫೋನ್ ಆಪರೇಟರ್, ಇಬ್ಬರು ಎಸ್ಕಾರ್ಟ್, ಧವಳಗಿರಿ ನಿವಾಸದಲ್ಲಿ ಅಡುಗೆ ಮಾಡುವವನಿಗೆ, ಒಬ್ಬ ಕಾರು ಚಾಲಕನಿಗೆ ಸೇರಿ ಸಿಎಂ ಯಡಿಯೂರಪ್ಪ ಸುತ್ತಮುತ್ತಲಿರುವ ಒಟ್ಟು 10 ಜನರಿಗೆ ಕೊರೋನಾ ಸೋಂಕು ಹರಡಿದೆ.
ಕೊರೋನಾ ಸೋಂಕು ಪತ್ತೆಯಾಗಿರುವುದರಿಂದ ಇಂದಿನಿಂದ ಕೆಲ ದಿನಗಳ ಕಾಲ ನಾನು ಮನೆಯಿಂದಲೇ ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ. ವೀಡಿಯೋ ಕಾನ್ಫರೆನ್ಸ್ ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ, ನಾನು ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕೆಯ ಕ್ರಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
![](https://prajapragathi.com/wp-content/uploads/2020/05/Yedd-1.gif)