ಶ್ರೀಗಳಿಗೆ ಭಾರತ ರತ್ನ ನೀಡಲು ಸಿಎಂ ಮನವಿ

ಬೆಂಗಳೂರು:

     ‘ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ನೀಡುವಂತೆ ಮತ್ತೊಮ್ಮೆ ಪ್ರಧಾನಿ, ರಾಷ್ಟ್ರಪತಿಗಳಿಗೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

      ತೋಟಗಾರಿಕೆ ಇಲಾಖೆ ವತಿಯಿಂದ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ  ಗಣರಾಜ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನದಲ್ಲಿ  ಮಹಾತ್ಮ ಗಾಂಧೀಜಿ 150ನೇ ಜನ್ಮದಿನಕ್ಕೆ ಪುಷ್ಪನಮನ ಸಲ್ಲಿಸಲಾಗಿದ್ದು, ಕುಮಾರಸ್ವಾಮಿಯವರು ಶ್ವೇತವರ್ಣದ ಪಾರಿವಾಳ ಹಾರಿಸುವ ಮೂಲಕ 209ನೇ ಪುಷ್ಪಪ್ರದರ್ಶನ ಉದ್ಘಾಟನೆ ಮಾಡಿ ಮಾತನಾಡಿದರು.

       ‘ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ನೀಡುವಂತೆ ಮತ್ತೊಮ್ಮೆ ಪ್ರಧಾನಿ, ರಾಷ್ಟ್ರಪತಿಗಳಿಗೆ ಮನವಿ ಮಾಡುತ್ತೇನೆ. ಇಂದು ಮಧ್ಯಾಹ್ನ ಮಠಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತೇನೆ. ದೇವರ ದಯೆಯಿಂದ‌ ಅವರು ಬೇಗ ಗುಣಮುಖರಾಗಲಿ, ಬಹಳ ವರ್ಷಗಳು ನಮ್ಮ‌ ಜೊತೆ ಇರ‌ಲಿ’ ಎಂದು ಹೇಳಿದರು.

       ಪುಷ್ಪ ಪ್ರದರ್ಶನದಲ್ಲಿ ರಾಜ್​ಘಾಟ್​, ದಂಡಿಯಾತ್ರೆ, ಬಾಪೂ ಕುಟೀರ, ಸಬರಮತಿ ಆಶ್ರಮಗಳು ಪ್ರಮುಖ ಆಕರ್ಷಣೆಯಾಗಿವೆ. ಫಲಪುಷ್ಪ ಪ್ರದರ್ಶನದಲ್ಲಿ ತೋಟಗಾರಿಕಾ ಸಚಿವ ಎಂ.ಸಿ.ಮನಗೋಳಿ, ಮೇಯರ್​ ಗಂಗಾಂಬಿಕಾ, ವಿಧಾನ ಪರಿಷತ್​ ಸದಸ್ಯ ಶರವಣ ಇತರರು ಭಾಗವಹಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap