ಬೆಂಗಳೂರು :
ಮಾಜಿ ಸಚಿವ ಹಾಗೂ ಶಿವಾಜಿನಗರ ಕ್ಷೇತ್ರದ ಶಾಸಕ ಆರ್.ರೋಷನ್ ಬೇಗ್ ಅವರನ್ನು ಕಾಂಗ್ರೆಸ್ ಪಕ್ಷದ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲನುಭವಿಸಿದ ಬಳಿಕ ಪಕ್ಷದ ನಾಯಕರ ವಿರುದ್ದವಾಗಿ ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದರು. ಪ್ರಧಾನಿ ಮೋದಿ ಅವರ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡುತ್ತಿದ್ದರು. ಅಲ್ಲದೇ ಇತ್ತೀಚೆಗೆ ಐಎಂಎ ಪ್ರಕರಣದಲ್ಲಿ ರೋಷನ್ ಬೇಗ್ ಹೆಸರು ಕೇಳಿ ಬಂದಿತ್ತು.
ಈ ಎಲ್ಲಾ ಕಾರಣದಿಂದ ಪಕ್ಷಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದ ಹಿನ್ನಲೆಯಲ್ಲಿ ಹೈಕಮಾಂಡ್ ಸೂಚನೆಯಂತೆ ಬೇಗ್ ಅವರ ವಿರುದ್ಧ ಕೆಪಿಸಿಸಿ ಕ್ರಮ ಕೈಗೊಂಡಿದ್ದು, ಕಾಂಗ್ರೆಸ್ ಪಕ್ಷದ ಸದಸ್ಯತ್ವದಿಂದ ಅಮಾನತುಗೊಳಿಸಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
