ಬೆಂಗಳೂರು:
ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಭದ್ರತಾ ಕಾರ್ಯನಿರ್ವಹಿಸುತ್ತಿದ್ದ ಕಾನ್ಸ್ಟೆಬಲ್ಗೆ ಕರೊನಾ ಸೋಂಕು ತಗುಲಿದೆ.
ಮೂಲತಃ ಉತ್ತರ ಕರ್ನಾಟಕ ಭಾಗದವ ರಾದ ಕಾನ್ಸ್ಟೆಬಲ್, ವಾರದ ಹಿಂದೆ ತಮ್ಮ ಊರಿಗೆ ಹೋಗಿ ಬಂದಿದ್ದರು. 2 ದಿನದ ಹಿಂದೆ ಜ್ವರ ಕಾಣಿಸಿಕೊಂಡಿದೆ. ಶಂಕೆ ಮೇರೆಗೆ ಕರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪೊಲೀಸ್ ಕಾನ್ಸ್‌ಟೇಬಲ್ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿತ್ತು. ಭಾನುವಾರ (ಮೇ 31) ವರದಿ ಬಂದಿದ್ದು, ಸೋಂಕು ದೃಢಪಟ್ಟಿದೆ.
ಈ ಕಾನ್ಸ್‌ಟೇಬಲ್ ರೋಗಿ ನಂಬರ್ 3195 ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.ಭಾನುವಾರ ಪೊಲೀಸ್ ಕಾನ್ಸ್‌ಟೇಬಲ್‌ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾನ್ಸ್ಟೆಬಲ್ ನೆಲೆಸಿದ್ದ ಮನೆ ಯನ್ನು ಸೋಂಕು ನಿವಾರಣ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಲಾಗಿದೆ. ಅವರ ಜೊತೆ ಸಂಪರ್ಕದಲ್ಲಿದ್ದವರಿಗೆ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ. ದ್ವಿತೀಯ ಹಂತದ ಸಂಪರ್ಕ ಹೊಂದಿದವರನ್ನು ಪತ್ತೆ ಹಚ್ಚಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ