ಹೊಸದಿಲ್ಲಿ:
ಅನರ್ಹ ಶಾಸಕರ ಮೇಲ್ಮನವಿ ಅರ್ಜಿ ಕುರಿತು ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆದಿದ್ದು, ತ್ರಿಸದಸ್ಯ ಪಿಠವು ತೀರ್ಪನ್ನು ಕಾಯ್ದಿರಿಸಿದೆ.
ಇಂದು ನಡೆದ ವಿಚಾರಣೆಯಲ್ಲಿ ಚುನಾವಣಾ ಆಯೋಗ ಪರ ವಕೀಲರು ಸ್ಪೀಕರ್ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿದ್ದಾರೆ. ಸ್ಪೀಕರ್ಗೆ ಶಾಸಕರನ್ನು ಅನರ್ಹಗೊಳಿಸುವ ಅಧಿಕಾರವಿದೆ. ಆದ್ರೆ, ಉಪ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆದೇಶಿಸುವ ಅಧಿಕಾರ ಸ್ಪೀಕರ್ಗೆ ಇಲ್ಲ ಎಂದು ವಾದ ಮಂಡಿಸಿದ್ದಾರೆ.
ಒಂದು ವೇಳೆ ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದರು ಎಂದಾದರೆ, ಅನರ್ಹತೆಗೆ ಯಾವ ಬೆಲೆ ಇದೆ. ಸದನದ ಆಂತರಿಕ ವಿಚಾರಗಳಲ್ಲಿ ನ್ಯಾಯಾಲಯ ಪ್ರವೇಶ ಮಾಡಬಾರದು ಎಂಬುದು ಕಪಿಲ್ ಸಿಬಲ್ ಅವರ ವಾದ.
ಅಲ್ಲದೇ ಅನರ್ಹ ಶಾಸಕರಿಗೆ ಯಾವ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು. ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾಯಿಸಬೇಕು ಎಂದು ವಾದ ಮಂಡಿಸಿದ್ದಾರೆ.
ಶಾಸಕರ ಅನರ್ಹತೆ ಪ್ರಕರಣದ ತೀರ್ಪನ್ನು ದೀಪಾವಳಿ ನಂತರ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ