ನವದೆಹಲಿ:
ನಮ್ಮ ರಾಜಿನಾಮೆಯನ್ನು ಅಂಗೀಕರಿಸಲು ಬೇಕು ಅಂತಲೆ ವಿಳಂಬ ಮಾಡಲಾಗುತ್ತಿದೆ ಎಂದು ಮುಂಬೈನಲ್ಲಿರುವ ಅತೃಪ್ತ ಶಾಸಕರು ಸ್ಪೀಕರ್ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಈಗಾಗಲೇ 13 ಶಾಸಕರ ರಾಜೀನಾಮೆಯನ್ನು ಪರಿಶೀಲಿಸಿದ್ದು, ಈ ಪೈಕಿ 8 ಶಾಸಕರದ ರಾಜೀನಾಮೆ ಪತ್ರ ಕ್ರಮಬದ್ಧವಾಗಿಲ್ಲ ಎಂದಿರುವುದು ಭಿನ್ನಮತೀಯ ಶಾಸಕರಿಗೆ ಅಸಮಾಧಾನ ಉಂಟು ಮಾಡಿದೆ. ಕ್ರಮಬದ್ಧವಾದ ರಾಜೀನಾಮೆಗಳನ್ನು ಕೂಡಾ ಸ್ಪೀಕರ್ ರಮೇಶ್ ಕುಮಾರ್ ಅವರು ಅಂಗೀಕರಿಸಿಲ್ಲ, ಉಳಿದ ರಾಜೀನಾಮೆಗಳನ್ನು ತಿರಸ್ಕರಿಸಲು ಸೂಕ್ತ ಕಾರಣ ಕೂಡಾ ನೀಡದೆ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಆರೋಪಿಸಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅತೃಪ್ತ ಶಾಸಕರು, ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಅತೃಪ್ತರ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅರ್ಜಿ ಸಲ್ಲಿಸಿದ್ದು ಸಿಜೆ ಪೀಠದ ಮುಂದೆ ವಾದ ಮಂಡಿಸಲಿದ್ದು, ಸುಪ್ರೀಂಕೋರ್ಟ್ ಸಿಜೆ ಪೀಠದ ಮುಂದೆ ನಾಳೆ ವಿಚಾರಣೆ ನಡೆಯಲಿದೆ.
ನಿನ್ನೆ ಅತೃಪ್ತ ಶಾಸಕರ ರಾಜಿನಾಮೆ ಪತ್ರವನ್ನು ಪರಿಶೀಲನೆ ನಡೆಸಿದ ರಮೇಶ್ ಕುಮಾರ್ ಅವರು 5 ರಾಜಿನಾಮೆ ಪತ್ರ ಸರಿಯಾಗಿದೆ. ಇನ್ನು 8 ಅಪೃಪ್ತ ಶಾಸಕರ ರಾಜಿನಾಮೆ ಕ್ರಮಬದ್ಧವಾಗಿಲ್ಲ ಎಂದು ಹೇಳಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
