ಬೆಂಗಳೂರು:
ಕೆಎಸ್ ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಶಾಕ್ ನೀಡಲು ಸಾರಿಗೆ ಇಲಾಖೆ ಸಜ್ಜಾಗಿದೆ ಎನ್ನಲಾಗಿದೆ.
ಬಸ್ ಪ್ರಯಾಣ ದರ ಏರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ಸಾರಿಗೆ ಇಲಾಖೆ ಅಧಿಕಾರಿಗಳ ಸಭೆ ನಡೆಯಲಿದೆ.
ಸಭೆಯಲ್ಲಿ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದು, ಬಸ್ ಪ್ರಯಾಣ ದರ ಪರಿಷ್ಕರಣೆ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು. ದರ ಏರಿಕೆ ಕುರಿತಾಗಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಶೇ.18 ರಷ್ಟು ಬಸ್ ಪ್ರಯಾಣ ದರ ಏರಿಕೆಗೆ ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿವೆ. ಹಿಂದಿನ ಮೈತ್ರಿ ಸರ್ಕಾರಕ್ಕೆ ಸಾರಿಗೆ ನಿಗಮಗಳ ವತಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಕುರಿತಾಗಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬಹುದೆಂದು ಹೇಳಲಾಗಿದೆ. ಒಂದು ವೇಳೆ ಸಾರಿಗೆ ಅಧಿಕಾರಿಗಳ ಪ್ರಸ್ತಾವನೆಗೆ ಸಿಎಂ ಸೂಚನೆ ನೀಡಿದರೆ ಕೆಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ