ಬೆಂಗಳೂರು:
ಭತ್ತದ ಬೆಲೆ ಕುಸಿತದಿಂದ ಕೆಂಗೆಟ್ಟಿರುವ ರೈತರ ಸಂಕಷ್ಟಕ್ಕೆ ಧಾವಿಸಿರುವ ಸಿಎಂ ಎಚ್.ಡಿ ಕುಮಾರಸ್ವಾಮಿ, ಸರ್ಕಾರದ ವತಿಯಿಂದಲೇ ಪ್ರತಿ ಕ್ವಿಂಟಾಲ್ ಭತ್ತವನ್ನು 1600 ರೂ. ನಂತೆ ಖರೀದಿ ಮಾಡಲು ತೀರ್ಮಾನಿಸಿದ್ದಾರೆ.
ಈ ಬಾರಿ ಭತ್ತದ ಬಂಪರ್ ಬೆಳೆ ಬಂದಿದ್ದರೂ ಸಹ ಸೂಕ್ತ ಬೆಲೆ ಸಿಗದೆ ರೈತರು ಕಂಗಾಲಾಗಿದ್ದರು. ದಿಢೀರ್ ಬೆಲೆ ಕುಸಿತದಿಂದಾಗಿ ತಲೆ ಮೇಲೆ ಕೈ ಹೊತ್ತು ಕೂರುವಂತಾಗಿತ್ತು. ಇದೀಗ ರೈತರ ಸಮಸ್ಯೆ ಪರಿಹರಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ರೈತರ ಸಂಕಷ್ಟದ ಹಿನ್ನೆಲೆಯಲ್ಲೆ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಅವರಿಗೆ, ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ನಾಡಗೌಡ ವೆಂಕಟರಾವ್ ಅವರು ಭತ್ತದ ಬೆಳೆಯ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಕೂಡಲೇ ಮಾರುಕಟ್ಟೆಯ ಮೂಲಕ ಒಂದು ಕ್ವಿಂಟಾಲ್ ಭತ್ತವನ್ನು 1600 ರೂ. ನಂತೆ ಖರೀದಿಸುವಂತೆ ಸೂಚನೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ