ರಾಜ್ಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಸೇವನೆ ನಿಷೇಧ!!

ಬೆಂಗಳೂರು :

     ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

      ಸರ್ಕಾರದ ಆದೇಶ ಉಲ್ಲಂಘಿಸಿದಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 188, 268, 269, 270 ಅಡಿಯಲ್ಲಿ ಸಂಬಂಂಧಪಟ್ಟ ಅಧಿಕಕಾರಿಗಳು ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

      ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಮಂತ್ರಾಲಯದ ಸೂಚನೆಯಂತೆ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020ರ ಸೆಕ್ಷನ್4(2) ಎ ಹಾಗೂ ಭಾರತೀಯ ದಂಡ ಸಂಹಿತೆ 1860ರಡಿ ಈ ಆದೇಶ ಹೊರಡಿಸಲಾಗಿದೆ.

      ಶುಕ್ರವಾರ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ತಂಬಾಕು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಕೋವಿಡ್-19 ಮತ್ತು ಇತರ ಸಾಂಕ್ರಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೋವಿಡ್-19 ಹೆಚ್ಚುತ್ತಿದ್ದು, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಸಿಎಂಆರ್ ಕೂಡಾ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾಂಕ್ರಮಿಕ ರೋಗ ಹರಡುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link