ಬೆಂಗಳೂರು :
ರಾಜ್ಯ ಸರ್ಕಾರಿ ನೌಕರರಿಗೆ ವಾರ್ಷಿಕ 15 ರಜೆ ನೀಡಲು ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಈ ಹಿಂದೆ 15 ಇದ್ದಂತ ಸಾಂದರ್ಭಿಕ ರಜೆಯನ್ನು 10ಕ್ಕೆ ಇಳಿಕೆ ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ಇಳಿಕೆ ಮಾಡಿದ್ದಂತ ಸಾಂದರ್ಭಕ ರಜೆಯನ್ನು 15ಕ್ಕೆ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಸರ್ಕಾರದ ಅಧೀನ ಕಾರ್ಯದರ್ಶಿ ಮೊಹಮ್ಮದ ನಯೀಮ್ ಮೊಮಿನ್, ಶಿಕ್ಷಣ ಹಾಗೂ ಆರೋಗ್ಯ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಎರಡನೇ ಮತ್ತು ನಾಲ್ಕನೇ ಶನಿವಾರದ ರಜೆ ಸೌಲಭ್ಯದಿಂದ ವಂಚಿತರಾಗಿರುವುದರಿಂದ, ಈ ವೃಂದದ ನೌಕರರಿಗೆ ಈ ಹಿಂದಿನಂತೆ ಪ್ರತಿ ಕ್ಯಾಲೆಂಡರ್ ವರ್ಷಕ್ಕೆ 15 ದಿವಸಗಳ ಸಾಂದರ್ಭಿಕ ರಜೆ ಮಂಜೂರು ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಮನವಿ ಮಾಡಿರುತ್ತದೆ.
ಈ ಮನವಿಯ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಾಂದರ್ಭಿಕ ರಜೆಯನ್ನು ನಾಲ್ಕನೇ ಶನಿವಾರದ ಸಾರ್ವತ್ರಿಕ ರಜೆಯು ಅನ್ವಯವಾಗದಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ 2020ನೇ ಕ್ಯಾಲೆಂಡರ್ ವರ್ಷದಿಂದ ಜಾರಿಗೆ ಬರುವಂತೆ ವಾರ್ಷಿಕ 15 ದಿನಗಳ ಸಾಂದರ್ಭಿಕ ರಜೆ ಹಾಗೂ 2 ಪರಿಮಿತ ರಜೆಯನ್ನು ಮುಂದುವರೆಸಲು ಮಂಜೂರು ಮಾಡಿ ಸೂಚಿಸಲಾಗಿದೆ.
ಹೀಗಾಗಿ ರಾಜ್ಯದ ಸರ್ಕಾರಿ ನೌಕರರ 10ಕ್ಕೆ ಇಳಿಕೆಯಾಗಿದ್ದಂತ ಸಾಂದರ್ಭಿಕ ರಜೆಯು 15ಕ್ಕೆ ಏರಿಕೆಯಾದಂತೆ ಆಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ