ಬೆಂಗಳೂರು:
ಖಾಸಗಿ ಶಾಲೆಗಳು ಶೇ.30ರಷ್ಟು ಶುಲ್ಕ ಕಡಿತಗೊಳಿಸುವಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.
ಇಲಾಖೆ ಅಧೀನ ಕಾರ್ಯದರ್ಶಿ ಹೆಚ್.ಎಸ್.ಶಿವಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದು, 2020-21ನೇ ಸಾಲಿನಲ್ಲಿನ ಶಾಲಾ ಬೋಧನಾ ಶುಲ್ಕದ ಶೇ.70ರಷ್ಟು ಮಾತ್ರ ಪಡೆಯಲು ಅನುಮತಿ ನೀಡಲಾಗಿದೆ. ಶಾಲಾ ಅಭಿವೃದ್ಧಿ ಶುಲ್ಕ, ಐಚ್ಚಿಕ ಶುಲ್ಕ, ಟ್ರಸ್ಟ್, ಸೊಸೈಟಿ ಸೇರಿದಂತೆ ಉಳಿದಂತೆ ಯಾವುದೇ ಶುಲ್ಕ ಪಡೆಯದಂತೆ ಆದೇಶದಲ್ಲಿ ತಿಳಿಸಲಾಗಿದೆ.
ಒಂದೊಮ್ಮೆ ಪೋಷಕರು ಈಗಾಗಲೇ ಪೂರ್ಣ ಶುಲ್ಕ ಪಾವತಿಸಿದಲ್ಲಿ ಹೆಚ್ಚುವರಿ ಶುಲ್ಕವನ್ನು ಮುಂದಿನ ವರ್ಷಕ್ಕೆ ಕಾಯ್ದುಕೊಳ್ಳುವಂತೆಯೂ ಸೂಚಿಸಲಾಗಿದೆ. ಅಲ್ಲದೇ ಪೋಷಕರಿಗೆ ಮೂರು ಕಂತುಗಳಲ್ಲಿ ಶುಲ್ಕವನ್ನು ಕಟ್ಟುವಂತೆ ಅವಕಾಶವನ್ನು ನೀಡಬೇಕು ಎಂದೂ ಸಹಾ ಹೇಳಿದೆ.
ಇನ್ನು ಶಾಲಾ ಶುಲ್ಕ ಕಡಿತ ಆದೇಶ ಪಾಲನೆಗೆ ಜಿಲ್ಲೆಗಳಲ್ಲಿ ಸಮಿತಿಗಳನ್ನು ರಚಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ