ಬೆಂಗಳೂರು:
ಕಾಂಗ್ರೆಸ್ ಟ್ರಬಲ್ ಶೂಟರ್, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು ಜಾರಿ ನಿರ್ದೇಶನಾಲಯದ(ಇಡಿ) ವಿಚಾರಣೆಗೆ ಹಾಜರಾಗಬೇಕೆಂದು ಹೈಕೋರ್ಟ್ ಆದೇಶಿಸಿದೆ.
ನವ ದೆಹಲಿಯ ಮನೆಗಳಲ್ಲಿ ದೊರೆತ 8.60 ಕೋಟಿ ರೂಪಾಯಿಗಳಷ್ಟು ನಗದು ಪತ್ತೆ ಪ್ರಕರಣದ ಸಂಬಂಧ ಶಾಸಕ ಡಿ.ಕೆ.ಶಿವಕುಮಾರ್ ಮತ್ತಿತರರ ವಿರುದ್ಧ ಜಾರಿ ನಿರ್ದೇಶನಾಲಯ ಹೊರಡಿಸಿತ್ತು.
ಇಡಿ ಸಮನ್ಸ್ ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಸೇರಿದಂತೆ ಗೆಳೆಯರಾದ ಆಂಜನೇಯ, ರಾಜೇಂದ್ರ, ಹನುಮಂತಯ್ಯ ತಕಾರರು ಅರ್ಜಿ ಸಲ್ಲಿಸಿದ್ದರು
ಸಮನ್ಸ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಇಡಿಗೆ ನೋಟೀಸ್ ನೀಡಲು ಹೈಕೋರ್ಟ್ ನಿರಾಕರಿಸಿ, ಈ ಪ್ರಕರಣ ವಿಚಾರಣೆಗೆ ಯೋಗ್ಯವಾಗಿದೆ. ಚಿದಂಬರಂ ಅವರಂತೆ ಡಿಕೆ ಶಿವಕುಮಾರ್ ಸಹ ವಿಚಾರಣೆ ಎದುರಿಸಬೇಕು ಎಂದು ನ್ಯಾ.ಅರವಿಂದ್ ಕುಮಾರ್ ತಮ್ಮ ಆದೇಶದಲ್ಲಿ ತಿಳಿಸಿ, ಇಡಿ ವಿಚಾರಣೆಗೆ ಗ್ರೀನ್ ಸಿಗ್ನಲ್ ನೀಡಿ ತೀರ್ಪು ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
