ತೇಜೋವಧೆ ಪ್ರಕರಣ : ತೇಜಸ್ವಿ ಸೂರ್ಯಗೆ ಹಿನ್ನಡೆ!!

ಬೆಂಗಳೂರು:

      ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ನಕಾರಾತ್ಮಕ ಸುದ್ದಿಗಳನ್ನು ಬಿತ್ತರಿಸದಂತೆ ನಗರದ ಸಿವಿಲ್ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್ ಇಂದು ತೆರವುಗೊಳಿಸಿದೆ.

       ಕಳೆದ ವಾರಗಳ ಹಿಂದೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಬಗ್ಗೆ ಮಹಿಳೆಯೊಬ್ಬರು ಮಾಡಿದ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರಿಂದಾಗಿ  ತೇಜಸ್ವಿ ಸೂರ್ಯ ಸಿವಿಲ್ ನ್ಯಾಯಾಲಯದಲ್ಲಿ ಅಸಲು ದಾವೆ ಸಲ್ಲಿಸುವ ಮೂಲಕ ನನ್ನ ವಿರುದ್ಧ ಮಾಧ್ಯಮಗಳು ಯಾವುದೇ ತಪ್ಪು, ದುರುದ್ದೇಶಪೂರಿತ, ಮಾನಹಾನಿಗೊಳಿಸುವ ಮತ್ತು ನನ್ನ ಘನತೆಗೆ ಕುಂದು ತರುವಂತಹ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ನೀಡಬೇಕು ಎಂದು ಮಾಧ್ಯಮಗಳ ವಿರುದ್ಧ ದಾವೆ ಸಲ್ಲಿಸಿ, ಸಿವಿಲ್ ಕೋರ್ಟ್ ನಲ್ಲಿ ನಿರ್ಬಂಧ ಆದೇಶವನ್ನು ಪಡೆದಿದ್ದರು.

     ಈ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ದೆಹಲಿಯ ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆಯ ಅಧ್ಯಕ್ಷ ಪ್ರೊಫೆಸರ್ ತ್ರಿಲೋಚನ ಶಾಸ್ತ್ರೀ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿತ್ತು.

      ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ತೇಜಸ್ವಿ ಸೂರ್ಯ ಪಡೆದಿದ್ದ ತಾತ್ಕಾಲಿಕ ಆದೇಶವನ್ನು ತೆರವು ಗೊಳಿಸಿ, “ಮಾನಹಾನಿಕರವಲ್ಲದ ವರದಿಗಳನ್ನು ಪ್ರಕಟಿಸುವುದಕ್ಕೆ ಪ್ರತಿವಾದಿಗಳಿಗೆ ನಿರ್ಬಂಧವಿಲ್ಲ. ವಿಷಯಗಳು ಮಾನಹಾನಕಾರಿಯಾಗಿದ್ದರೆ ಅವರು ಚುನಾವಣಾ ಆಯೋಗದ ಮೊರೆ ಹೋಗಬಹುದು” ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

       ಪತ್ರಿಕೆ, ಟಿವಿ ಚಾನೆಲ್ ಗಳು, ಫೇಸ್ ಬುಕ್ , ಯುಟ್ಯೂಬ್ ನಂತಹ ಸಾಮಾಜಿಕ ಜಾಲತಾಣಗಳು ತೇಜಸ್ವಿ ಸೂರ್ಯ ಅವರಿಗೆ ಸಂಬಂಧಿಸಿದ ಸುದ್ದಿ ಪ್ರಕಟಿಸುವ ಅಥವಾ ಕಾರ್ಯಕ್ರಮ ಪ್ರದರ್ಶಿಸುವುದಕ್ಕೆ ನಗರದ ಸಿವಿಲ್ ನ್ಯಾಯಾಲಯ ನಿರ್ಬಂಧ ವಿಧಿಸಿರುವುದು ಸರಿಯಲ್ಲ ಎಂದು ತೀರ್ಪು ಪ್ರಕಟಿಸಿತು.  ಹೈಕೋರ್ಟ್ ನ ಈ ಆದೇಶದಿಂದ ತೇಜಸ್ವಿ ಸೂರ್ಯರಿಗೆ ಭಾರೀ ಹಿನ್ನಡೆಯಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

 

Recent Articles

spot_img

Related Stories

Share via
Copy link
Powered by Social Snap