ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಪ್ರಮಾಣವಚನ !!

ಬೆಂಗಳೂರು:

      ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರು, ಆಯುಕ್ತರ ಅಧಿಕಾರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಇಂದು ನಡೆದಿದ್ದು, ಮುಖ್ಯ ಆಯುಕ್ತರಾಗಿ ಎನ್‌.ಸಿ.ಶ್ರೀನಿವಾಸ್‌, ಮಾಹಿತಿ ಆಯುಕ್ತರಾಗಿ ಎಸ್‌.ಎಂ.ಸೋಮಶೇಖರ್‌‌ ಹಾಗೂ ಕೆ.ಪಿ.ಮಂಜುನಾಥ್‌ ಅಧಿಕಾರ ಸ್ವೀಕಾರ ಮಾಡಿದ್ದಾರೆ.

      ನಗರದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆದಿದ್ದು, ಆಯುಕ್ತರಿಗೆ ರಾಜ್ಯಪಾಲ ವಜೂಭಾಯಿ ವಾಲಾರಿಂದ ಪ್ರತಿಜ್ಞಾವಿಧಿ ಬೋಧಿಸಲಾಯಿತು.

      ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

      ಇತ್ತೀಚೆಗೆ ಸುಪ್ರೀಂಕೋರ್ಟ್‌ ನೀಡಿದ್ದ ಆದೇಶದಲ್ಲಿ ಮುಖ್ಯ ಮಾಹಿತಿ ಆಯುಕ್ತರ ಸ್ಥಾನ ಹೆಚ್ಚು ದಿನ ಖಾಲಿ ಉಳಿಸಿಕೊಳ್ಳಬಾರದು ಎಂದು ಹೇಳಿದ್ದರಿಂದ ಸರಕಾರ ಕೆಲ ದಿನಗಳ ಹಿಂದೆ ಈ ಮೂವರ ಹೆಸರನ್ನು ಶಿಫಾರಸು ಮಾಡಿತ್ತು. 

      ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಚುನಾವಣೆ ಆಯೋಗದ ಸಹಮತ ಪಡೆದು ನೇಮಕ ಮಾಡಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ