ಬೆಂಗಳೂರು :
ರಾಜ್ಯದಲ್ಲಿ ಸ್ಥಾಪನೆಯಾಗುವ ಉದ್ಯಮಗಳಲ್ಲಿ ಸಿ ಮತ್ತು ಡಿ ದರ್ಜೆಯ ಉದ್ಯೋಗಗಳು ಕನ್ನಡಿಗರಿಗೇ ಆದ್ಯತೆ ನೀಡಬೇಕೆಂಬ ನಿಯಮಾವಳಿ ಜಾರಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ನಿನ್ನೆ ನಡೆದ ಸಿಎಂ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಇದಕ್ಕೆ ಸಂಬಂಧಪಟ್ಟ ನಿಯಮಾವಳಿಗಳನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ, ಸಿ ಮತ್ತು ಡಿ ದರ್ಜೆ ಸೇರಿದಂತೆ ಯಾವುದೇ ಹುದ್ದೆಗಳನ್ನು ಕಡ್ಡಾಯವಾಗಿ ನೀಡಬೇಕೆಂಬ ನಿಯಮಾವಳಿ ತಿದ್ದುಪಡಿ ಮಾಡಲು ಸಾಧ್ಯವಿಲ್ಲ. ಹಾಗೆ ಮಾಡಿದರೆ, ನ್ಯಾಯಾಲದಲ್ಲಿ ಪ್ರಶ್ನಿಸುವ ಸಾಧ್ಯತೆ ಇರುವುದರಿಂದ ಆದ್ಯತೆ ಮೇಲೆ ಕನ್ನಡಿಗರಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಈ ಮೂಲಕ ಕನ್ನಡ ರಾಜ್ಯೋತ್ಸವ ದಿನದಂದು ರಾಜ್ಯ ಸರ್ಕಾರ ಕನ್ನಡಿಗರಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯದ ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲು ನಿರ್ಧರಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ