ಮಹಾತ್ಮಾ ಗಾಂಧಿ ಪ್ರಶಸ್ತಿಗೆ ಹೆಗ್ಗೋಡು ಪ್ರಸನ್ನ ಆಯ್ಕೆ

ಬೆಂಗಳೂರು:

      ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರನ್ನು ಈ ಬಾರಿಯ ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ  ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಕಟಿಸಿದರು. 

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನೀಡಲಾಗುವ ಈ ಪ್ರಶಸ್ತಿ 5 ಲಕ್ಷ ರೂ. ನಗದು ಬಹುಮಾನ ಒಳಗೊಂಡಿದ್ದು, ಗಾಂಧಿ ಜಯಂತಿ ದಿನದಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. 

      ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಅವರ ಅಧ್ಯಕ್ಷತೆಯ ಸಮಿತಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ಹುಣಸವಾಡಿ ರಾಜನ್, ಗಾಂಧೀ ಸ್ಮಾರಕ ನಿಧಿ ಅಧ್ಯಕ್ಷ ವೂಡೆ ಪಿ. ಕೃಷ್ಣ ಈ ಸಮಿತಿಯ ಸದಸ್ಯರಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ್ ಸದಸ್ಯ ಕಾರ್ಯದರ್ಶಿಗಳಾಗಿದ್ದರು. 

      ಉಳಿ, ದಂಗೆಯ ಮುಂಚಿನ ದಿನಗಳು, ಒಂದು ಲೋಕದ ಕತೆ, ಹದ್ದು ಮೀರಿದ ಹಾದಿ, ಮಹಿಮಾಪುರ, ಜಂಗಮದ ಬದುಕು ಇನ್ನೂ ಕೆಲವು ನಾಟಕಗಳನ್ನು ಅವರು ರಚಿಸಿದ್ದಾರೆ. ಕಾರ್ನಾಡರ ತುಘಲಕ್, ಮ್ಯಾಕ್ಸಿಂಗಾರ್ಕಿಯ ತಾಯಿ (ಮದರ್), ಕದಡಿದ ನೀರು ಇನ್ನೂ ಹಲವು ನಾಟಕಗಳನ್ನು ಅವರು ನಿರ್ದೇಶಿಸಿದ್ದಾರೆ. 

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link