ಸುಪ್ರೀಂ ತೀರ್ಪಿನಿಂದ ಮೈತ್ರಿ ಸರ್ಕಾರಕ್ಕೆ ಬಿಗ್ ರಿಲೀಫ್!!?

ನವದೆಹಲಿ:

     ಸಮ್ಮಿಶ್ರ ಸರ್ಕಾರದ ಶಾಸಕರ ರಾಜೀನಾಮೆ ಅಂಗೀಕಾರಕ್ಕೆ ಸಂಬಂಧಪಟ್ಟಂತೆ ಯಥಾಸ್ಥಿತಿ ಕಾಪಾಡುಂತೆ ಕಾಪಾಡುವಂತೆ ನ್ಯಾಯಾಪೀಠ ಹೇಳಿ ಹೇಳಿ ಮಂಗಳವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ.

       ತಮ್ಮ ರಾಜೀನಾಮೆಗಳನ್ನು ಅಂಗೀಕರಿಸದೆ ನಾನಾ ಕಾರಣಗಳನ್ನು ಮುಂದೊಡ್ಡಿ ಸ್ಪೀಕರ್ ರಮೇಶ್‌ ಕುಮಾರ್‌ ಸತಾಯಿಸುತ್ತಿದ್ದಾರೆ ಎಂದು ದೂರಿ ಅತೃಪ್ತ ಶಾಸಕರು ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. 

       ಅತೃಪ್ತ ಶಾಸಕರ ರಾಜೀನಾಮೆಗಳನ್ನು ಗುರುವಾರ ಸಂಜೆ 6 ಗಂಟೆಯೊಳಗೆ ಸ್ವೀಕರಿಸಬೇಕು ಮತ್ತು ಶುಕ್ರವಾರದ ವಿಚಾರಣೆಗೆ ಮುನ್ನ ತೀರ್ಮಾನದ ವರದಿಯನ್ನು ಕೋರ್ಟಿಗೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರವೇ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸೂಚಿಸಿತ್ತು. ಅಲ್ಲದೆ ಸ್ಪೀಕರ್ ಅವರಿಗೂ ನಿನ್ನೆಯೇ ಈ ಬಗ್ಗೆ ತೀರ್ಮಾನ ಕೈಗೊಂಡು ಇಂದಿನ ವಿಚಾರಣೆ ಆರಂಭಕ್ಕೆ ಮುನ್ನ ತನಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

      ಹೀಗಾಗಿ ಸುಪ್ರೀಂಕೋರ್ಟ್ ನಿರ್ದೇಶನದಂತೆ ಅತೃಪ್ತ ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸ್ಪೀಕರ್ ರಮೆಶ್ ಕುಮಾರ್ ನಿರ್ಧಾರದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ.
      ಶಾಸಕರ ರಾಜೀನಾಮೆ, ಶಾಸಕರ ಅನರ್ಹತೆ ವಿಚಾರದಲ್ಲಿ ಸ್ಪೀಕರ್ ಮಂಗಳವಾರದ ತನಕ ಯಾವುದೇ ತೀರ್ಮಾನವನ್ನು ಕೈಗೊಳ್ಳುವಂತಿಲ್ಲ. ಮಂಗಳವಾರ ಪುನಃ ಅರ್ಜಿಯ ವಿಚಾರಣೆಯನ್ನು ನಡೆಸುವುದಾಗಿ ಸುಪ್ರೀಂಕೋರ್ಟ್‌ ಹೇಳಿತು.

      ಅತೃಪ್ತ ಶಾಸಕರ ಅರ್ಜಿ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್ ಸದ್ಯಕ್ಕೆ ಅಂಗೀಕಾರವೂ ಇಲ್ಲ. ಅನರ್ಹತೆ ಇಲ್ಲ, ಮಂಗಳವಾರಕ್ಕೆ ತನ್ನ ಅದೇಶವನ್ನು ಕಾಯ್ದಿರಿಸಿಕೊಳ್ಳಲಾಗಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. 

      ಅಲ್ಲದೇ ರಾಜೀನಾಮೆ ನೀಡಿರುವ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಸಿರುವ ದೂರುಗಳ ಬಗ್ಗೆ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳಬಾರದು ಎಂದು ಸ್ಪೀಕರ್‌ಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. 

     ಸುಪ್ರೀ ಕೋರ್ಟಿನ ಈ ಆದೇಶದಿಂದಾಗಿ ಸದ್ಯಕ್ಕೆ ಮೈತ್ರಿ ಸರ್ಕಾರಕ್ಕೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link