ದೆಹಲಿ:
ವಿಶ್ವಾಸ ಮತಯಾಚನೆಗೆ ಈಗಾಗಲೇ ವಿಳಂಬ ಮಾಡುತ್ತಿರುವ ದೋಸ್ತಿ ಸರ್ಕಾರಕ್ಕೆ ಈಗ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಹೌದು, ವಿಧಾನಸಭೆಯಲ್ಲಿ ಇಂದೇ ವಿಶ್ವಾಸಮತ ಯಾಚನೆಗೆ ಸೂಚಿಸಬೇಕು ಎಂದು ಕೋರಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವವರ ಪರ ವಕೀಲ ಮುಕುಲ್ ರೋಹಟಗಿ ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು ‘ಇಂದು ವಿಚಾರಣೆ ನಡೆಸುವುದು ಸಾಧ್ಯವಿಲ್ಲ’ ಎಂದು ಹೇಳಿದೆ.
‘ನಾಳೆ ಬೆಳಿಗ್ಗೆ ಈ ಅರ್ಜಿಯನ್ನು ಮೊದಲನೆಯದಾಗಿ ವಿಚಾರಣೆಗೆ ತೆಗೆದುಕೊಳ್ಳಿ’ ಎಂದು ಮುಕುಲ್ ರೋಹಟಗಿ ಮತ್ತೊಂದು ಮನವಿ ಸಲ್ಲಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, ‘ನಾಳೆಗೆ ಬೇಕಾದರೆ ನೋಡೋಣ’ ಎಂದು ಪ್ರತಿಕ್ರಿಯಿಸಿದರು.
‘ಇಂದು ಸಂಜೆ 5 ಗಂಟೆಯ ಒಳಗೆ ವಿಶ್ವಾಸಮತ ಯಾಚನೆಗೆ ಸೂಚಿಸಿ’ ಎಂದು ಅತೃಪ್ತರ ಪರ ವಕೀಲ ಮುಕುಲ್ ರೋಹಟಗಿ ಕೋರಿದ್ದರು. ಸ್ಪೀಕರ್ ನಿರ್ಧಾರದ ವಿಚಾರದ ಬಗ್ಗೆ ನಾವು ಮಧ್ಯಪ್ರವೇಶಿಸುವುದಿಲ್ಲ. ಇಂದೇ ವಿಶ್ವಾಸ ಮತಯಾಚನೆ ನಡೆಸುವಂತೆ ನಾವು ಆದೇಶ ನೀಡುವುದಿಲ್ಲ. ಎಂದು ತಿಳಿಸಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಮತ್ತೊಂದು ದಿನ ರಿಲೀಫ್ ಸಿಕ್ಕಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ