ಬೆಂಗಳೂರು :
ಸಿಎಲ್ ಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯ ಅವರ ರಾಜೀನಾಮೆ ಇನ್ನೂ ಅಂಗೀಕರಿಸಿಲ್ಲ. ಹೀಗಾಗಿ ಸಿದ್ದು ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಆಯಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಿದ್ದರಾಮಯ್ಯರಿಗೆ ರಾಹುಲ್ ಗಾಂಧಿ ಕರೆ ಮಾಡಿ ಮಾತನಾಡಿದ್ದು, ಆರೋಗ್ಯ ವಿಚಾರಿಸಿದ್ದಾರೆ. ಮಾತುಕತೆ ವೇಳೆ ರಾಹುಲ್ ಅವರು, ನೀವು ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆಯಬೇಕು. ಈ ಬಗ್ಗೆ ದೆಹಲಿಗೆ ಬಂದಾಗ ಮಾತನಾಡುತ್ತೇನೆ. ಆರೋಗ್ಯ ಸಂಪೂರ್ಣ ಸುಧಾರಿಸಿದ ಬಳಿಕ ದೆಹಲಿಗೆ ಬರುವಂತೆ ತಿಳಿಸಿದ್ದಾರೆಂದು ಮಾಹಿತಿ ಸಿಕ್ಕಿದೆ.
ಸಿದ್ದರಾಮಯ್ಯ ಬಗ್ಗೆ ಹೆಚ್ಚು ಆತ್ಮೀಯತೆ. ಅಷ್ಟೇ ವಿಶ್ವಾಸ ಹೊಂದಿರುವ ರಾಹುಲ್ ಗಾಂಧಿ ಮಧ್ಯ ಪ್ರವೇಶದಿಂದ ಸಿದ್ದರಾಮಯ್ಯಗೆ ಮತ್ತೊಮ್ಮೆ ಅದೃಷ್ಟ ಕುಲಾಯಿಸಬಹುದು. ಸಿಎಲ್ ಪಿ ಹಾಗೂ ವಿಪಕ್ಷ ನಾಯಕನ ಸ್ಥಾನ ಎರಡರಲ್ಲೂ ಮುಂದುವರಿಯಲು ಸಿದ್ದರಾಮಯ್ಯರನ್ನ ಬೆಂಬಲಿಸಬಹುದು ಎಂಬ ಮಾಹಿತಿ ಲಭ್ಯವಾಗಿದೆ. ಈ ನಿರೀಕ್ಷೆ ನಿಜವಾದರೆ ರಾಜ್ಯ ಕಾಂಗ್ರೆಸ್ಸಿನಲ್ಲಿ ಸಿದ್ದರಾಮಯ್ಯ ಮತ್ತೊಮ್ಮೆ ಪವರ್ ಫುಲ್ ಆಗಿ ಹೊರಹೊಮ್ಮುವುದು ಖಚಿತವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
