ಬೆಂಗಳೂರು:
ರಾಜ್ಯದ ಸರ್ಕಾರಿ ಶಾಲೆಯ ಮಕ್ಕಳು ಇನ್ನುಮುಂದೆ ಬಿಸಿಯೂಟ ಮತ್ತು ಹಾಲಿನ ಜೊತೆಗೆ ಜೇನಿನ ಸವಿಯನ್ನೂ ಸಹಾ ಸವಿಯಬಹುದು.ಇಂತಹದೊಂದು ನೂತನ ಯೋಜನೆ ರಾಜ್ಯ ಸರ್ಕಾರ ಕೈಹಾಕಿದೆ. ಕೇಂದ್ರ ಮನವ ಸಂಪನ್ಮೂಲ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಈ ಸೂಚನೆಯನ್ನು ನೀಡಿದೆ.
ಮಧ್ಯಾಹ್ನದ ಬಿಸಿಯೂಟ, ಹಾಲಿನ ಜತೆ ಇದೀಗ ಜೇನುತುಪ್ಪವೂ ಸಿಗಲಿದೆ. ಉತ್ತಮ ಪೌಷ್ಠಿಕಾಂಶವುಳ್ಳ ಆಹಾರವನ್ನು ಮಕ್ಕಳಿಗೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಈಗಾಗಲೇ ಎಲ್ಲಾ ರಾಜ್ಯಗಳಿಗೂ ಸೂಚನೆ ನೀಡಿದೆ.
ಉದ್ದೇಶ:
ಜೇನಿನಲ್ಲಿ ಬ್ಯಾಕ್ಟೀರಿಯಾಗಳನ್ನು ತಡೆಗಟ್ಟುವ ಶಕ್ತಿ ಇದೆ. ಜೇನು ಸೇವನೆಯಿಂದ ವಿದ್ಯಾರ್ಥಿಗಳಲ್ಲಿ ಜೀರ್ಣಕ್ರಿಯೆ ಉತ್ತಮವಾಗುತ್ತದೆ. ಆಂಟಿ ಬಯೋಟಿಕ್ ಗುಣಗಳನ್ನು ಹೊಂದಿದೆ. ಕೆಮ್ಮು, ಗಂಟಲು ಕೆರೆತ, ರಕ್ತದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಗುಣ ಜೇನುತುಪ್ಪಕ್ಕಿದೆ.ಕೊಬ್ಬಿನಂತಹ ಅಂಶಗಳು ಕರಗಲಿವೆ.