ಬೆಂಗಳೂರು:
ರೈಲಿನ ವಿಳಂಬದಿಂದಾಗಿ ಭಾನುವಾರದಂದು ನೀಟ್ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತರಾಗಿ ಕಂಗಾಲಾಗಿದ್ದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ದೊರೆತಿದೆ.
ಕರ್ನಾಟಕದಲ್ಲಿ ರೈಲು ತಡವಾಗಿ ಆಗಮಿಸಿದ ಹಿನ್ನಲೆಯಲ್ಲಿ ಪರೀಕ್ಷೆಗೆ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವಕಾಶ ವಂಚಿತರಾಗಿದ್ದರು. ಇನ್ನು ಒಡಿಶ್ಸಾ ರಾಜ್ಯದಲ್ಲಿ ಫೋನಿ ಚಂಡಮಾರುತ ಹಿನ್ನಲೆಯಲ್ಲಿ ನೀಟ್ ಪರೀಕ್ಷೆಯನ್ನು ಮುಂದೂಡಲಾಗಿತ್ತು.
ರೈಲು ವಿಳಂಬದಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಾಧ್ಯವಾಗದೆ ಇರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮತ್ತೊಂದು ಅವಕಾಶ ಕಲ್ಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದರು. ಅಲ್ಲದೇ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರೂ ವಿದ್ಯಾರ್ಥಿಗಳ ಆತಂಕಕ್ಕೆ ಸ್ಪಂದಿಸಿ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದಿದ್ದರು.
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವರು, ವಿದ್ಯಾರ್ಥಿಗಳ ಮನವಿಯನ್ನು ಪುರಸ್ಕರಿಸಿರುವ ಪ್ರಕಾಶ್ ಜಾವ್ಡೇಕರ್ ಅವರು ಮತ್ತೊಮ್ಮೆ ನೀಟ್ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಪ್ರಕಟಿಸಿದ್ದಾರೆ.
Happy to announce that #Karnataka Students who missed #NEET exam , due to railway delay will get another chance.@MoHFW_INDIA @HRDMinistry @PIB_India @MIB_India @DG_NTA @cbseindia29 @ciet_ncert @DDNewsLive @airnewsalerts @DVSBJP@CMofKarnataka
— Chowkidar Prakash Javadekar (@PrakashJavdekar) May 6, 2019
ಈ ಸಂಬಂಧ ಟ್ವೀಟ್ ಮಾಡಿರುವ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಮತ್ತೊಮ್ಮೆ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಮೇ 20 ರಂದು ಕರ್ನಾಟಕದಲ್ಲಿ ಮರು ಪರೀಕ್ಷೆ ಹಾಗೂ ಒಡಿಶ್ಸಾ ರಾಜ್ಯದಲ್ಲಿ ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಲಾಗಿದೆ. ಇದರಿಂದ ಪರೀಕ್ಷೆ ಬರೆಯಲು ಸಾಧ್ಯವಾಗದೆ ಬೇಸರಗೊಂಡಿದ್ದ ಸುಮಾರು 500 ವಿದ್ಯಾರ್ಥಿಗಳಿಗೆ ಸಂತಸ ಉಂಟಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ