ರಾಜ್ಯ ವಿಧಾನ ಪರಿಷತ್‌ ಚುನಾವಣೆ ದಿನಾಂಕ ಪ್ರಕಟ!!

ಬೆಂಗಳೂರು: 

      ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು ಜೂನ್ 29ಕ್ಕೆ 7 ಸ್ಥಾನಕ್ಕಾಗಿ ಮತದಾನ ನಡೆಯಲಿದೆ.

      ಚುನಾವಣಾ ಆಯೋಗ ವಿಧಾನ ಪರಿಷತ್ ಚುನಾವಣೆ ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸಿದ್ದು, ಜೂನ್ 29ರಂದು  ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಸಮಯಾವಕಾಶ ನೀಡಲಾಗಿದೆ. ಅಂದು ಸಂಜೆಯ ವೇಳೆಗೆ ಫಲಿತಾಂಶ ಪ್ರಕಟಿಸಲಾಗುತ್ತದೆ.

      ನಾಮಪತ್ರ ಸಲ್ಲಿಸಲು ಜೂನ್ 18ರ ವರೆಗೆ ಅವಕಾಶ ಕಲ್ಪಿಸಿದ್ದು, ಜೂನ್ 19 ನಾಮಪತ್ರಗಳ ಪರಿಶೀಲನೆ ನಡೆದರೆ 22 ನಾಮಪತ್ರ ಹಿಂಪಡೆಯಲು ಕಡೇ ದಿನ. 29ರಂದು ಮತದಾನ ನೆರವೇರಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap