ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ರಾಜೀನಾಮೆ!!?

ನವದೆಹಲಿ :

     ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿದ್ದ ಕೆ.ಸಿ.ವೇಣುಗೋಪಾಲ್ ಅವರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

      ಕೆ.ಸಿ.ವೇಣುಗೋಪಾಲ್ ತಮ್ಮ ರಾಜೀನಾಮೆ ಪತ್ರವನ್ನು ಈಗಾಗಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಯವರಿಗೆ ರವಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮಾತ್ರವಲ್ಲ  ಡಿ.14 ರ ಒಳಗೆ  ರಾಜ್ಯ ಕಾಂಗ್ರೆಸ್ ಉಸ್ತುವಾರಿಗೆ ನೂತನ ಉಸ್ತುವಾರಿಯನ್ನು ನೇಮಿಸಲು ತೀರ್ಮಾನಿಸಲಾಗಿದೆಯಂತೆ ಎಂಬ ಸುದ್ಧಿ ಹರಿದಾಡುತ್ತಿದೆ.

      ನಿನ್ನೆಯಷ್ಟೇ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸ್ಥಾನಕ್ಕೆ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇವರ ನಂತ್ರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಕೂಡ ರಾಜೀನಾಮೆ ನೀಡಿದ್ದರು. ಇದೀಗ ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿದ್ದ ಕೆ.ಸಿ.ವೇಣುಗೋಪಾಲ್ ಅವರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ