ತುಮಕೂರು :
ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದು, ಮಠದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಹೋಗಿ ದರ್ಶನ ಪಡೆದುಕೊಂಡಿದ್ದಾರೆ.
ದರ್ಶನದ ಬಳಿಕ ಮಾತನಾಡಿದ ಸುದೀಪ್ ತುಂಬಾ ದಿನಗಳ ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದೆ. ಸಿದ್ಧಗಂಗಾ ಮಠಕ್ಕೆ 4 ತಿಂಗಳಿಂದ ಭೇಟಿ ನೀಡಲು ಆಗಿರಲಿಲ್ಲ. ಜೊತೆಗೆ, ಸಿದ್ಧಗಂಗಾ ಮಠಕ್ಕೆ ದೇಣಿಗೆ ನೀಡಬೇಕಿತ್ತು. ಹಾಗಾಗಿ ಇಂದು ಭೇಟಿಕೊಟ್ಟೆ ಎಂದು ಸುದೀಪ್ ತಿಳಿಸಿದ್ದಾರೆ.
ಇದೇ ವೇಳೆ ಸುದೀಪ್ ಅವರಿಗೆ ನಿರ್ದೇಶಕ ಇಂದ್ರಜೀತ್ ಲಂಕೇಶ್ ಭೇಟಿ ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಅರ್ಚಕರು ಶಿವಕುಮಾರ ಶ್ರೀಗಳ ಭಾವಚಿತ್ರವನ್ನು ಸುದೀಪ್ ಅವರಿಗೆ ಕಾಣಿಕೆಯಾಗಿ ಕೊಟ್ಟಿದ್ದಾರೆ.
ನಾಳೆ ಸುದೀಪ್ ಅವರ ಜನ್ಮ ದಿನವಾಗಿದ್ದು, ಈಗಾಗಲೇ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವುದಿಲ್ಲ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ