ಬೆಂಗಳೂರು :
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್)ಯ ನೂತನ ಅಧ್ಯಕ್ಷರಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಾಲಚಂದ್ರ ಜಾರಕಿಹೊಳಿ ಅವರು ಮಹಾಮಂಡಳಿಯ 13 ನಿರ್ದೇಶಕರ ಬೆಂಬಲ ಗಳಿಸುವಲ್ಲಿ ಸಫಲರಾಗಿದ್ದಾರೆ.
ಈ ಬೆಳವಣಿಗೆಯೊಂದಿಗೆ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಜೆಡಿಎಸ್‌ನ ಎಚ್.ಡಿ.ರೇವಣ್ಣ ಹಾಗೂ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್‌ಗೆ ಆಘಾತವಾಗಿದೆ.
ಅಧ್ಯಕ್ಷ ಚುನಾವಣೆಯಲ್ಲಿ ಹೆಚ್.ಡಿ.ರೇವಣ್ಣ ಅವರು ಚುನಾವಣೆಯಿಂದ ಹಿಂದೆ ಸರಿದ ಪರಿಣಾಮ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಘೋಷಣೆ ಆಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ