ಕೊಡಗಿನ ನೆರೆ ಸಂತ್ರಸ್ತ್ರರಿಗೆ 50 ಸಾವಿರ ಹೆಚ್ಚಿನ ಪರಿಹಾರ : ದೇಶಪಾಂಡೆ

ಬೆಂಗಳೂರು: Related image

       ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಬಿದ್ದ ಭಾರಿ ಮಳೆ, ಭೂಕುಸಿತದಿಂದ ಹಾನಿಗೊಳಗಾಗಿರುವ ಕುಟುಂಬಗಳಿಗೆ ಬಟ್ಟೆಬರೆ ಮತ್ತು ಅಗತ್ಯ ದಿನಬಳಕೆ ವಸ್ತುಗಳಿಗೆಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ. ಹೆಚ್ಚುವರಿ ಪರಿಹಾರ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಕಂದಾಯ ಮತ್ತು ಕೌಶಲಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

      ಪ್ರಕೃತಿ ವಿಕೋಪದಿಂದ ಹಾನಿಹೊಂಡಿರುವ ಮನೆಗಳಿಗೆ ಎಸ್.ಡಿ.ಆರ್.ಎಫ್, ಎನ್.ಡಿ.ಆರ್.ಎಫ್ ಮಾರ್ಗಸೂಚಿಯ ಪ್ರಕಾರ ಬಟ್ಟೆಬರೆ ನೆರವಿಗೆಂದು 1,800 ರೂ. ಮತ್ತು ದಿನಬಳಕೆ ವಸ್ತುಗಳಿಗೆಂದು 2,000/- ರೂ. (ಒಟ್ಟು 3,800/- ಮಾತ್ರ) ಕೊಡಲು ಅವಕಾಶವಿದೆ. ಆದರೆ ಇದು ಸಾಕಾಗುವುದಿಲ್ಲ ಎನ್ನುವ ಹಿನ್ನೆಲೆಯಲ್ಲಿ ಈಗ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದ್ದಾರೆ. 

       ಕೊಡಗಿನಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ 1,156 ಮನೆಗಳು ತೀವ್ರ ಹಾನಿಗೊಳಗಾಗಿವೆ. ಇಷ್ಟೂ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ. ಪರಿಹಾರ ನೀಡಲಾಗುವುದು. ಇದಕ್ಕಾಗಿ 5.78 ಕೋಟಿ ರೂ. ವೆಚ್ಚವಾಗಲಿದೆ ಎಂದು ಕಂದಾಯ ಸಚಿವರು ತಿಳಿಸಿದ್ದಾರೆ.

       ಕೊಡಗಿಗೆ ತಾವೂ ಸೇರಿದಂತೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅನೇಕ ಸಚಿವರು ಇತ್ತೀಚೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕೆಂದು ಸಂತ್ರಸ್ತರು ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಸ್ಪಂದಿಸಿ ಕ್ರಮ ಕೈಗೊಂಡಿದ್ದು ಸಚಿವ ಸಂಪುಟದ ಒಪ್ಪಿಗೆಯೂ ದೊರೆತಿದೆ ಎಂದು ಸಚಿವ ದೇಶಪಾಂಡೆ ಹೇಳಿದ್ದಾರೆ.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap