ಕೊಡಗಿನಲ್ಲಿ ಹೈ ಅಲರ್ಟ್ : ಮುಂದುವರಿದ ಮಳೆ ಆರ್ಭಟ , ರಸ್ತೆ ಕುಸಿತ!!

ಮಡಿಕೇರಿ: 

     ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಸಾಮಾನ್ಯಕ್ಕಿಂತ ಅಧಿಕ ವರ್ಷಧಾರೆಯಾಗುವುದಾಗಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವುದರಿಂದ ಹೈ ಅಲರ್ಟ್ ಘೋಷಿಸಲಾಗಿದೆ.

      ಭಾಗಮಂಡಲ, ತಲಕಾವೇರಿ, ನಾಪೋಕ್ಲು, ಬೇತ್ರಿ, ಮೂರ್ನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಶುಕ್ರವಾರ ಮಧ್ಯಾಹ್ನದ ತನಕವೂ ಬಿಡುವು ನೀಡಿದ್ದ ಮಳೆ ಬಳಿಕ ಆರ್ಭಟಿಸಲು ಆರಂಭಿಸಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನಮಟ್ಟ ಮತ್ತಷ್ಟು ಏರಿಕೆಯಾಗಿದೆ. ಮೂರ್ನಾಡು – ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ಗಾಳಿಬೀಡು-ಪಾತಿ-ಕಾಲೂರು ರಸ್ತೆಯಲ್ಲಿ ಭೂಕುಸಿತದ ವರದಿಯಾಗಿದ್ದು, ಮುಂದಿನ ಆದೇಶದವರೆಗೂ ವಾಹನ ಸಂಚಾರಕ್ಕೆ ತಡೆ ನೀಡಲಾಗಿದೆ.

      ಕುಂಬಾರಗುಂಡಿ ನದಿ ದಂಡೆಯ ನಿವಾಸಿಗಳು ಆಗಸ್ಟ್‌ ಮೊದಲ ವಾರ ಸುರಿದಿದ್ದ ಭಾರೀ ಮಳೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದರು. ಈಗ ಮತ್ತೆ ಆತಂಕದಲ್ಲಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap